ನವದೆಹಲಿ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ ನಲ್ಲೂ ಜಾಮೀನು ನಿರಾಕರಿಸಲಾಗಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿ ಜೈಲು ಸೇರಿರುವ ಪ್ರಜ್ವಲ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಸುಪ್ರೀಂ ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ.
ಅಕ್ಟೋಬರ್ 21ರಂದು ಪ್ರಜ್ವಲ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka Highcourt) ವಜಾಗೊಳಿಸಿತ್ತು. ಈ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ (Supreme Court) ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕೂಡ ಜಾಮೀನು ನಿರಾಕರಿಸಿದೆ.
ಪ್ರಜ್ಚಲ್, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ಸೈಬರ್ ಸೆಲ್ನಲ್ಲಿ ದಾಖಲಾಗಿದ್ದ 2 ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಅರ್ಜಿ ವಜಾಗೊಳಿಸಿತ್ತು.