ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ತನಿಖೆ ಕೈಗೊಂಡಿರುವ ಎಸ್ ಐಟಿ ಅಧಿಕಾರಿಗಳು 2,144 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ.
ಪ್ರಕರಣಕ್ಕೆ ಸಂಬಧಿಸಿದಂತೆ ನೂರಕ್ಕೂ ಅಧಿಕ ಸಾಕ್ಷ್ಯಗಳನ್ನು ಸಂಗ್ರಹಿಸಿ, ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಅಪ್ಪ, ಮಗನ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ಮೊದಲ ಪ್ರಕರಣ ಇದಾಗಿದೆ. ಇನ್ನೂ ಎರಡು ಪ್ರಕರಣಗಳಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಬೇಕಿದೆ.
ಮನೆ ಕೆಲಸ ಮಾಡುತ್ತಿದ್ದ ಸಂತ್ರಸ್ತ ಮಹಿಳೆಗೆ ರೇವಣ್ಣ ಮೈ ಕೈ ಮುಟ್ಟಿ ದೌರ್ಜನ್ಯ ಎಸಗಿದ್ದಾರೆ. ಹಣ್ಣು ಕೊಡುವ ನೆಪದಲ್ಲಿ ಸೊಂಟ ಚಿವುಟಿ, ಸೀರೆ ಎಳೆದು ಪ್ರಜ್ವಲ್ ದೌರ್ಜನ್ಯವೆಸಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಆದರೆ, ಮಗ ಪ್ರಜ್ವಲ್ ವಿರುದ್ಧ ಹೆದರಿಸಿ ನಿರಂತರವಾಗಿ ಅತ್ಯಾಚಾರ ನಡೆಸಿರುವ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಬಸವನಗುಡಿ ಮನೆಯಲ್ಲೂ ಅತ್ಯಾಚಾರ ನಡೆಸಿರುವುದಾಗಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.
ಹೊತ್ತಿಲ್ಲದ ಹೊತ್ತಿನಲ್ಲಿ ಸಂತ್ರಸ್ತೆಯ ಜೊತೆ ಬೆದರಿಸಿ ನಿರಂತರವಾಗಿ ಲೈಂಗಿಕ ಸಂಪರ್ಕ ನಡೆಸಿರುವ ಆರೋಪ ಕೇಳಿ ಬಂದಿದೆ.