ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಇಂದು ಕೂಡ ಬೆಂಗಳೂರಿಗೆ ಬರುವುದು ಅನುಮಾನ ಎನ್ನಲಾಗಿದೆ.
ಪ್ರಜ್ವಲ್ ಜರ್ಮನ್ ನ ಮ್ಯೂನಿಚ್ ನಿಂದ ಬೆಂಗಳೂರಿಗೆ ಬುಕ್ ಆಗಿದ್ದ ವಿಮಾನ ಟಿಕೆಟ್ (Flight Ticket) ರದ್ದುಗೊಳಿಸಲಾಗಿದೆ. ಹೀಗಾಗಿ ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ಈಗಾಗಲೇ ಟಿಕೆಟ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ. ಲುಪ್ತಾನ್ಸಾ ವಿಮಾನದಲ್ಲಿ ಬುಕ್ ಆಗಿದ್ದ ಟಿಕೆಟ್ ನ್ನು ನಾಲ್ಕು ದಿನಗಳ ಹಿಂದೆಯೇ ರದ್ದು ಮಾಡಿಕೊಂಡಿರುವುದು ತಿಳಿದು ಬಂದಿದೆ. ಅಲ್ಲದೇ, ಟಿಕೆಟ್ ರದ್ದು ಮಾಡಿದರೂ ಹಣ ಮರಳಿ ಪಡೆಯದೆ ಈಗ ಪ್ರಜ್ವಲ್ ಭಾರೀ ಗೊಂದಲ ಸೃಷ್ಟಿಸಿದ್ದಾರೆ. ಯಾವುದೇ ಕ್ಷಣದಲ್ಲಾದರೂ ಮತ್ತೆ ಟಿಕೆಟ್ ಖರೀದಿಸಲು ಪ್ರಜ್ವಲ್ ಈ ತಂತ್ರ ಹೂಡಿರಬಹುದು ಎಂದು ಕೂಡ ಶಂಕೆ ವ್ಯಕ್ತವಾಗಿದೆ.
ಅಧಿಕಾರಿಗಳು ಈಗ ಪ್ರಜ್ವಲ್ ಮೇಲೆ ನಿಗಾ ಇಟ್ಟಿದ್ದಾರೆ. ಬೇರೆ ವಿಮಾನದಲ್ಲಿ ಟಿಕೆಟ್ ಬುಕ್ ಆಗುತ್ತದೆಯೇ, ಆಗಿದೆಯೇ ಎಂದು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ಎಸ್ಐಟಿ ತಂಡ ಬೀಡುಬಿಟ್ಟಿದೆ.
3.5 ಲಕ್ಷ ರೂ. ಮೊತ್ತದ ಬ್ಯುಸಿನೆಸ್ ಕ್ಲಾಸ್ ಟಿಕೆಟ್ ನ್ನು ಪ್ರಜ್ವಲ್ ಕಾಯ್ದಿರಿಸಿದ್ದರು. ಇಲ್ಲಿಯವರೆಗೆ 2 ಬಾರಿ ಪ್ರಜ್ವಲ್ ಟಿಕೆಟ್ ರದ್ದು ಮಾಡಿದ್ದಾರೆ. ಮೇ 03 ಮತ್ತು 15 ರಂದು ಭಾರತಕ್ಕೆ ಬರಲು ಟಿಕೆಟ್ ಬುಕ್ ಮಾಡಿ ಕ್ಯಾನ್ಸಲ್ ಮಾಡಿದ್ದಾರೆ. ಹೀಗಾಗಿ ಅಧಿಕಾರಿಗಳು ಮುಂದಿನ ಟಿಕೆಟ್ ಬುಕ್ಕಿಂಗ್ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ.