ಬೆಂಗಳೂರು: ಪೆನ್ ಡ್ರೈವ್ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ ಶುರುವಾಗಿದೆ.
ಪ್ರಕರಣ ಬಯಲಿಗೆ ಬರುತ್ತಿದ್ದಂತೆ ವಿದೇಶಕ್ಕೆ ಹಾರಿರುವ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಎಸ್ಐಟಿ ನಿರಂತರ ಪ್ರಯತ್ನ ಮಾಡುತ್ತಿದೆ. ಈಗಾಗಲೇ ಎಸ್ ಐಟಿ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಇದ್ದಾರೆ. ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 196 ರಾಷ್ಟ್ರಗಳಿಗೆ ಇಂಟರ್ ಪೋಲ್ ಮಾಹಿತಿ ನೀಡಲಾಗಿದೆ.
ಹೀಗಾಗಿ ಪ್ರಜ್ವಲ್ ಗೆ ಮತ್ತಷ್ಟು ಸಂಕಷ್ಟ ಎದುರಾಗುವಂತಾಗಿದೆ.. ಪ್ರಜ್ವಲ್ ರೇವಣ್ಣ ಬಗ್ಗೆ ಮಾಹಿತಿ ಸಿಕ್ಕರೆ ಹಂಚಿಕೊಳ್ಳುತ್ತೇವೆ. ಏರ್ಪೋರ್ಟ್, ಬಂದರು, ಗಡಿಯಲ್ಲಿ ಕಾಣಿಸಿಕೊಂಡರೆ ಮಾಹಿತಿ ನೀಡುವುದಾಗಿ ಎಸ್ಐಟಿಗೆ ಇಂಟರ್ಪೋಲ್ ಹೇಳಿದೆ. ಹೀಗಾಗಿ ಪ್ರಜ್ವಲ್ ಗೆ ಕ್ಷಣಕ್ಷಣಕ್ಕೂ ಅತಂಕ ಶುರುವಾಗಿದೆ.