ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಎಸ್ ಐಟಿ ಅಧಿಕಾರಿಗಳು ಮತ್ತೆ 5 ದಿನ ವಶಕ್ಕೆ ಪಡೆದಿದ್ದಾರೆ.
ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ನನ್ನು ಅಧಿಕಾರಿಗಳು ಮತ್ತೆ ಕಸ್ಟಡಿಗೆ ಪಡೆದಿದ್ದಾರೆ. ಈಗಾಗಲೇ ಎರಡು ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಗೆ ಪಡೆದಿದ್ದ ಎಸ್ ಐಟಿ (SIT) ಅಧಿಕಾರಿಗಳು ಸದ್ಯ ಮೂರನೇ ಪ್ರಕರಣದಲ್ಲಿಯೂ ವಶಕ್ಕೆ ಪಡೆದಿದ್ದಾರೆ.
ಜಿಲ್ಲಾ ಪಂಚಾಯತ್ ಸದಸ್ಯೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜೂನ್ 18ರಂದು 2ನೇ ಕೇಸ್ ನಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 42ನೇ ಎಸಿಎಂಎಂ ಕೋರ್ಟ್ ನ ನ್ಯಾ. ಸಂತೋಷ್ ಗಜಾನನ ಭಟ್ ಆದೇಶಿಸಿದ್ದರು. ಹೀಗಾಗಿ ಪ್ರಜ್ವಲ್ ಪರಪ್ಪನ ಅಗ್ರಹಾರ ಸೇರಿದ್ದ.
ಅಲ್ಲದೇ, ಜಾಮೀನು ಕೋರಿ ಪ್ರಜ್ವಲ್ ಅರ್ಜಿ ಸಲ್ಲಿಸಿದ್ದ. ಈ ಅರ್ಜಿ ವಿಚಾರಣೆಯನ್ನು ಜೂನ್ 24ಕ್ಕೆ ಕೋರ್ಟ್ ಮುಂದೂಡಿದೆ. ಆದರೆ, ಇದರ ಮಧ್ಯೆ ಎಸ್ ಐಟಿ ಅಧಿಕಾರಿಗಳು ಪ್ರಜ್ವಲ್ ವಿರುದ್ಧದ 3ನೇ ಅತ್ಯಾಚಾರ ಕೇಸ್ ನಲ್ಲಿ ಕಸ್ಟಡಿಗೆ ಪಡೆದಿದೆ.