ಬೆಂಗಳೂರು: ಶಾಸಕ ಪ್ರಕಾಶ್ ಹುಕ್ಕೇರಿ ಅವರು ದೆಹಲಿಯ ಎರಡನೇಯ ಕರ್ನಾಟಕ ಪ್ರತಿನಿಧಿಯಾಗಿ ನೇಮಕಗೊಂಡಿದ್ದಾರೆ.
ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನಮಾನ ನೀಡಲಾಗಿದೆ. ಜೊತೆಗೆ ಸಂಪುಟ ದರ್ಜೆ ಸಚಿವ ಸ್ಥಾನಮಾನದೊಂದಿಗೆ ರಾಜ್ಯಸಭೆಯ ಮಾಜಿ ಸದಸ್ಯ ಪ್ರೊ. ರಾಜೀವ್ ಗೌಡರನ್ನು ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷರಾಗಿ ನೇಮಕಾತಿ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.








