ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

Shwetha by Shwetha
July 30, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು, ಆ ಸ್ಥಾನಕ್ಕೆ ಕನ್ನಡಿಗ ಹಾಗೂ ಸಂಸದ ಪ್ರಲ್ಹಾದ ಜೋಶಿ ಅವರನ್ನು ನೇಮಕ ಮಾಡಿರುವುದು ಇದೀಗ ಹೊಸ ರಾಜಕೀಯ ಸಮರಕ್ಕೆ ನಾಂದಿ ಹಾಡಿದೆ. ಪ್ರಲ್ಹಾದ ಜೋಶಿ ಶಿಕ್ಷಣ ಸಚಿವರಾಗಿರುವುದು ಕನ್ನಡಿಗರು ಹೆಮ್ಮೆ ಪಡುವ ವಿಷಯವಲ್ಲ, ಬದಲಿಗೆ ತಲೆತಗ್ಗಿಸುವ ಘಟನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಿಡಿ ಕಾರಿದ್ದಾರೆ.

ಸೈದ್ಧಾಂತಿಕ ಅವಳಿ ಜವಳಿಗಳು

Related posts

ತಮಿಳುನಾಡಿಗೆ ನೀರು ಬಿಟ್ಟರೆ ಬೀದಿಗಿಳಿದು ಹೋರಾಟ: ದರ್ಶನ್ ಪುಟ್ಟಣ್ಣಯ್ಯ

ತಮಿಳುನಾಡಿಗೆ ನೀರು ಬಿಟ್ಟರೆ ಬೀದಿಗಿಳಿದು ಹೋರಾಟ: ದರ್ಶನ್ ಪುಟ್ಟಣ್ಣಯ್ಯ

July 30, 2026
ಗೃಹ ಇಲಾಖೆ ಕೇವಲ ಭಾಷಣ ಮಾಡ್ತಿದ್ಯಾ? ಅಕ್ರಮ ಬಾಂಗ್ಲಾ ವಲಸಿಗರ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಚಾಟಿ ಬೀಸಿದ ಕೋರ್ಟ್.

ಗೃಹ ಇಲಾಖೆ ಕೇವಲ ಭಾಷಣ ಮಾಡ್ತಿದ್ಯಾ? ಅಕ್ರಮ ಬಾಂಗ್ಲಾ ವಲಸಿಗರ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಚಾಟಿ ಬೀಸಿದ ಕೋರ್ಟ್.

July 30, 2026

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಸಿದ್ಧರಾಮಯ್ಯ, ನಿರ್ಗಮಿತ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ನೂತನ ಸಚಿವ ಪ್ರಲ್ಹಾದ ಜೋಶಿ ಇಬ್ಬರೂ ಸೈದ್ಧಾಂತಿಕವಾಗಿ ಅವಳಿ ಜವಳಿಗಳಿದ್ದಂತೆ. ಇವರಿಬ್ಬರೂ ಆರ್‌ಎಸ್‌ಎಸ್ ಮೂಲದ ಎಬಿವಿಪಿಯಿಂದ ಬಂದವರು. ಮಹಿಳೆಯರು, ದಲಿತರು, ಬಡವರು ಮತ್ತು ಹಿಂದುಳಿದ ವರ್ಗಗಳ ಬಗ್ಗೆ ಸಂಘ ಪರಿವಾರ ಹೊಂದಿರುವ ಅದೇ ಸಂಕುಚಿತ ಮನೋಭಾವವನ್ನೇ ಇವರೂ ಹೊಂದಿದ್ದಾರೆ. ಹೀಗಾಗಿ ಪ್ರಧಾನ್ ಜಾಗಕ್ಕೆ ಜೋಶಿ ಅವರನ್ನು ತಂದಿರುವುದು ಊದುವುದನ್ನು ಕೊಟ್ಟು ಬಾರಿಸುವುದನ್ನು ಕೊಂಡು ಬಂದಂತಾಗಿದೆ ಎಂದು ವ್ಯಂಗ್ಯವಾಡಿದ್ದಾರೆ. ಪಾತ್ರಧಾರಿಗಳು ಬದಲಾಗಿದ್ದಾರೆಯೇ ಹೊರತು, ಸೂತ್ರಧಾರಿಗಳಾದ ಆರ್‌ಎಸ್‌ಎಸ್ ನಿರ್ದೇಶನದಂತೆ ಇವರು ಕಾರ್ಯನಿರ್ವಹಿಸಬೇಕಾಗುತ್ತದೆ ಎಂದು ಅವರು ಟೀಕಿಸಿದ್ದಾರೆ.

ಅತ್ಯಾಚಾರಿಗಳ ಪರ ನಿಂತಿದ್ದ ಜೋಶಿ

ಪ್ರಲ್ಹಾದ ಜೋಶಿ ಅವರ ಹಿಂದಿನ ನಿಲುವುಗಳನ್ನು ಕೆದಕಿರುವ ಸಿದ್ಧರಾಮಯ್ಯ, ಗುಜರಾತ್ ಗಲಭೆಯ ಬಿಲ್ಕಿಸ್ ಬಾನೊ ಪ್ರಕರಣದ ಅತ್ಯಾಚಾರಿಗಳನ್ನು 2022ರಲ್ಲಿ ಗುಜರಾತ್ ಸರ್ಕಾರ ಬಿಡುಗಡೆಗೊಳಿಸಿದಾಗ ಜೋಶಿ ಅವರು ಅದನ್ನು ಬಹಿರಂಗವಾಗಿ ಸಮರ್ಥಿಸಿಕೊಂಡಿದ್ದರು. ಅತ್ಯಾಚಾರಿಗಳ ಪರವಾಗಿ ಮಾತನಾಡಿದ ವ್ಯಕ್ತಿಯನ್ನು ಶಿಕ್ಷಣ ಸಚಿವನ್ನಾಗಿ ಮಾಡಿರುವುದು ದೇಶದ ಶಿಕ್ಷಣ ವ್ಯವಸ್ಥೆಯ ಭವಿಷ್ಯದ ಬಗ್ಗೆ ಆತಂಕ ಮೂಡಿಸುತ್ತಿದೆ. ಇಂತಹ ಇತಿಹಾಸವುಳ್ಳ ವ್ಯಕ್ತಿ ಶಿಕ್ಷಣ ಸಚಿವರಾಗಿರುವುದು ಕರ್ನಾಟಕಕ್ಕೆ ಮತ್ತು ಕನ್ನಡಿಗರಿಗೆ ಒದಗಿದ ದೊಡ್ಡ ಅವಮಾನ ಎಂದು ಗುಡುಗಿದ್ದಾರೆ.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ಅವರು ಪ್ರಲ್ಹಾದ ಜೋಶಿ ಅವರ ಅಸಲಿ ಮುಖವಾಡವನ್ನು ದೇಶದ ಮುಂದೆ ಕಳಚಿಟ್ಟಿದ್ದಾರೆ. ಸದನದಲ್ಲಿ ಅವರ ಬಾಯಿ ಮುಚ್ಚಿಸಬಹುದು, ಆದರೆ ದೇಶದ ಕೋಟ್ಯಂತರ ಜನರ ಪ್ರಶ್ನೆಗಳಿಗೆ ಉತ್ತರ ನೀಡಲೇಬೇಕಾಗುತ್ತದೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿದ್ಯಾರ್ಥಿಗಳ ಮತ್ತು ಶಿಕ್ಷಕರ ಹಿತದೃಷ್ಟಿಯ ಬಗ್ಗೆ ಅಲ್ಪ ಕಾಳಜಿ ಇದ್ದರೂ, ತಕ್ಷಣವೇ ಪ್ರಲ್ಹಾದ ಜೋಶಿ ಅವರಿಂದ ಶಿಕ್ಷಣ ಖಾತೆಯನ್ನು ವಾಪಸ್ ಪಡೆಯಬೇಕು. ಧರ್ಮೇಂದ್ರ ಪ್ರಧಾನ್ ಹೋದ ಹಾದಿಯಲ್ಲೇ ಜೋಶಿ ಅವರೂ ಹೊರಹೋಗುವ ದಿನಗಳು ಹತ್ತಿರದಲ್ಲಿವೆ. ಈ ಮಹತ್ವದ ಖಾತೆಗೆ ಯಾರಾದರೂ ಅರ್ಹ ವ್ಯಕ್ತಿಯನ್ನು ನೇಮಕ ಮಾಡಬೇಕು ಎಂದು ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

ShareTweetSendShare
Join us on:

Related Posts

ತಮಿಳುನಾಡಿಗೆ ನೀರು ಬಿಟ್ಟರೆ ಬೀದಿಗಿಳಿದು ಹೋರಾಟ: ದರ್ಶನ್ ಪುಟ್ಟಣ್ಣಯ್ಯ

ತಮಿಳುನಾಡಿಗೆ ನೀರು ಬಿಟ್ಟರೆ ಬೀದಿಗಿಳಿದು ಹೋರಾಟ: ದರ್ಶನ್ ಪುಟ್ಟಣ್ಣಯ್ಯ

by Shwetha
July 30, 2026
0

ಕಾವೇರಿ ನೀರು ನಿರ್ವಹಣಾ ಮಂಡಳಿ (CWMA) ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ನಿರ್ದೇಶನದ ಕುರಿತು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ...

ಗೃಹ ಇಲಾಖೆ ಕೇವಲ ಭಾಷಣ ಮಾಡ್ತಿದ್ಯಾ? ಅಕ್ರಮ ಬಾಂಗ್ಲಾ ವಲಸಿಗರ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಚಾಟಿ ಬೀಸಿದ ಕೋರ್ಟ್.

ಗೃಹ ಇಲಾಖೆ ಕೇವಲ ಭಾಷಣ ಮಾಡ್ತಿದ್ಯಾ? ಅಕ್ರಮ ಬಾಂಗ್ಲಾ ವಲಸಿಗರ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಚಾಟಿ ಬೀಸಿದ ಕೋರ್ಟ್.

by Shwetha
July 30, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ಹಾವಳಿ ಮಿತಿಮೀರುತ್ತಿದ್ದರೂ, ರಾಜ್ಯ ಗೃಹ ಇಲಾಖೆ ಕಣ್ಮುಚ್ಚಿ ಕುಳಿತಿದೆಯೇ ಎಂಬ ಗಂಭೀರ ಪ್ರಶ್ನೆಯನ್ನು ಕರ್ನಾಟಕ ಹೈಕೋರ್ಟ್ ಎತ್ತಿದೆ. ಅಕ್ರಮ...

‘ವಿದ್ಯಾರ್ಥಿ ಚಳವಳಿಯಲ್ಲಿ ಇದ್ದರೆ ಬಂಧನಕ್ಕೂ ಸಿದ್ಧರಿರಬೇಕು’: ಜೆ.ಪಿ. ನಡ್ಡಾ

‘ವಿದ್ಯಾರ್ಥಿ ಚಳವಳಿಯಲ್ಲಿ ಇದ್ದರೆ ಬಂಧನಕ್ಕೂ ಸಿದ್ಧರಿರಬೇಕು’: ಜೆ.ಪಿ. ನಡ್ಡಾ

by Shwetha
July 30, 2026
0

ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಕೈಗೊಂಡ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಚಳವಳಿ ಹಾಗೂ ಪ್ರತಿಭಟನೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಬಂಧನ...

ಪದ್ಮಶ್ರೀ ಪುರಸ್ಕೃತ ವಿಜ್ಞಾನಿಯನ್ನು ಗೋಮೂತ್ರ ತಜ್ಞ ಎಂದ ಪ್ರಿಯಾಂಕಾ ಗಾಂಧಿ:ನಿಮ್ಮ ಮೆದುಳು ಕೆಲಸ ಮಾಡಲು ನೀವೇ ಗೋಮೂತ್ರ ಕುಡಿಯಿರಿ ಎಂದ ಬಿಜೆಪಿ.

ಪದ್ಮಶ್ರೀ ಪುರಸ್ಕೃತ ವಿಜ್ಞಾನಿಯನ್ನು ಗೋಮೂತ್ರ ತಜ್ಞ ಎಂದ ಪ್ರಿಯಾಂಕಾ ಗಾಂಧಿ:ನಿಮ್ಮ ಮೆದುಳು ಕೆಲಸ ಮಾಡಲು ನೀವೇ ಗೋಮೂತ್ರ ಕುಡಿಯಿರಿ ಎಂದ ಬಿಜೆಪಿ.

by Shwetha
July 30, 2026
0

ನವದೆಹಲಿ: 2026ರ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಚಿಸಿರುವ ನೂತನ ಪರೀಕ್ಷಾ ಸುಧಾರಣಾ ಸಮಿತಿ ಇದೀಗ ಭಾರೀ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ....

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (30-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 30, 2026
0

ದಿನ ಭವಿಷ್ಯ: 30-07-2026 ಮೇಷ ರಾಶಿ : ಇಂದಿನ ದಿನ ನಿಮಗೆ ವೃತ್ತಿ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಒದಗಿ ಬರಲಿವೆ. ನಿಮ್ಮ ಕಾರ್ಯಕ್ಷಮತೆ ಮತ್ತು ನಾಯಕತ್ವದ ಗುಣಗಳಿಂದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram