Pramod Mutalik: ಒಂದು ದಿನದ ಮೊದಲೇ ಉಡುಪಿ ಜಿಲ್ಲೆಯಲ್ಲಿ ಪ್ರತ್ಯಕ್ಷವಾದ ಪ್ರಮೋದ ಮುತಾಲಿಕ್
1 min read
ಉಡುಪಿ ಜಿಲ್ಲೆಯಲ್ಲಿ ಪ್ರತ್ಯಕ್ಷವಾದ ಪ್ರಮೋದ ಮುತಾಲಿಕ್
ಉಡುಪಿ : ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರಿಗೆ ಉಡುಪಿ ಜಿಲ್ಲಾಡಳಿತ ಇಂದು ಏ.15ರಂದು ಜಿಲ್ಲೆಗೆ ನಿರ್ಭಂದಿಸಿತ್ತು. ಆದರೆ ಪ್ರಮೋದ ಮುತಾಲಿಕ್ ನಿನ್ನೆ ಗುರುವಾರ ರಾತ್ರಿ ಜಿಲ್ಲೆಗೆ ಆಗಮಿಸಿದ್ದರು.
ಕುಂದಾಪುರ ಸಮಿಪದ ಗಂಗಳ್ಳೊ ಗ್ರಾಮದಲ್ಲಿ ಇಂದು ಕಾರ್ಯಕ್ರಮವೊಂದು ಆಯೋಜಿಸಲಾಗಿತ್ತು. ಈ ಸಂಬಂಧ ಪ್ರಮೋದ ಮುತಾಲಿಕ್ ಅವರನ್ನು ಆಹ್ವಾನಿಸಲಾಗಿತ್ತು. ಆದರೆ ಜಿಲ್ಲಾಡಳಿತ ಇವರು ಜಿಲ್ಲೆಯನ್ನು ಪ್ರವೇಶಿಸದಂತೆ ನಿರ್ಬಂಧ ಹೇರಿತ್ತು. ಈ ಹಿನ್ನಲೆಯಲ್ಲಿ ಒಂದು ದಿನದ ಮೊದಲೇ ಗಂಗೊಳ್ಳಿ ಗ್ರಾಮಕ್ಕೆ ಪ್ರಮೋದ ಮುತಾಲಿಕ್ ಆಗಮಿಸಿದ್ದಾರೆ.
ಗ್ರಾಮಕ್ಕೆ ನಿನ್ನೆ ರಾತ್ರಿ ಭೇಟಿ ನೀಡಿದ ಅವರು ಹಿಂದೂ ಜಾಗರಣ ವೇದಿಕೆ ಪ್ರಮುಖರ ಜತೆ ಚರ್ಚೆ ನಡೆಸಿದ್ದಾರೆ. ಬಿಜೆಪಿ ಸರಕಾರವೇ ನಿರ್ಬಂಧ ಹೇರುತ್ತಿರುವುದು ಬೇಸರ ತರಿಸಿದೆ ಎಂದು ಬಿಜೆಪಿ ಸರಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಉಡಡುಪಿ ಜಿಲ್ಲೆಗೆ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಗುರುವಾರ ಆದೇಶ ಹೊರಡಿಸಿದ್ದರು. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತ ಕಾಪಾಡುವ ದೃಷ್ಟಿಯಿಂದ ಏಪ್ರಿಲ್ 15 ರಂದು ನಿರ್ಬಂಧ ಹೇರಲಾಗಿತ್ತು. ಸಿ.ಆರ್.ಪಿ.ಸಿ ಸೆಕ್ಷನ್ 133,143 ಅಡಿಯಲ್ಲಿ ನಿಷೇಧಾಜ್ಞೆ ವಿಧಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದರು.