ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಕೋಮಾಗೆ ಜಾರಿದ್ದು, ಇದುವರೆಗೂ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ ಎನ್ನಲಾಗಿದೆ. ದೆಹಲಿಯ ಆರ್ಮಿ ರಿಸರ್ಚ್ ಆಯಂಡ್ ರೆಫೆರಲ್ ಆಸ್ಪತ್ರೆ ಈ ಬಗ್ಗೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಪ್ರಣಬ್ ಮುಖರ್ಜಿ ಅವರ ಆರೋಗ್ಯ ಯಥಾಸ್ಥಿತಿಯಲ್ಲಿದ್ದು, ಯಾವುದೇ ಬದಲಾವಣೆಗಳು ಕಂಡುಬಂದಿಲ್ಲ. ಅವರನ್ನು ವೆಂಟಿಲೇಟರ್ ಸಹಾಯದಲ್ಲಿ ಇಡಲಾಗಿದೆ ಎಂದು ತಿಳಿಸಲಾಗಿದೆ.
ಆ.10ರಂದು ಅನಾರೋಗ್ಯಕ್ಕೀಡಾಗಿದ್ದ ಪ್ರಣಬ್ ಮುಖರ್ಜಿ ಅವರನ್ನು ದೆಹಲಿಯ ಕಂಟೋನ್ಮೆಂಟ್‌ನ ಆರ್ಮಿ ರಿಸರ್ಚ್ ಆಯಂಡ್ ರೆಫೆರಲ್ ಆಸ್ಪತ್ರೆ ದಾಖಲಿಸಲಾಗಿತ್ತು. ಅವರಿಗೆ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಕಾರಣ ಸರ್ಜರಿ ಮಾಡಲಾಗಿದ್ದು, ಬಳಿಕ ವೆಂಟಿಲೇಟರ್ನಲ್ಲಿಟ್ಟು ಚಿಕಿತ್ಸೆ ಮುಂದುವರಿಸಲಾಗಿದೆ. ಈ ವೇಳೆ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ಸಹ ದೃಢವಾಗಿತ್ತು.