ನವದೆಹಲಿ: ಶ್ವಾಸಕೋಶದ ಸೋಂಕು ಮತ್ತು ಮೂತ್ರಪಿಂಡದ ವೈಫಲ್ಯದಿಂದ ಬಳಲುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ದೀರ್ಘ ಕೋಮಾ ಸ್ಥಿತಿಯಲ್ಲಿಯೇ ಇದ್ದಾರೆ. ಇನ್ನೂ ಪ್ರಣಬ್ ಮುಖರ್ಜಿ ಅವರಿಗೆ ವೆಂಟಿಲೇಟರ್ ನೆರವಿನಿಂದಲೇ ಚಿಕಿತ್ಸೆ ಮುಂದುವರಿಸಲಾಗಿದೆ.
84 ವರ್ಷದ ಮುಖರ್ಜಿ ಅವರ ಮಿದುಳಿನಲ್ಲಿ ರಕ್ತಹೆಪ್ಪುಗಟ್ಟಿದ್ದ ಕಾರಣ ಅವರಿಗೆ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಇದಾದ ಬಳಿಕವೂ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗಿಲ್ಲ. ಶಸ್ತ್ರಚಿಕಿತ್ಸೆಗೂ ಮುನ್ನ, ಅವರಿಗೆ ಕೋವಿಡ್-19 ಇರುವುದು ದೃಢಪಟ್ಟಿತ್ತು. ಇನ್ನೂ ಪ್ರಣಬ್ ಮುಖರ್ಜಿ ಅವರ ಹೃದಯಕ್ಕೆ ರಕ್ತ ಸಂಚಾರ ಸರಿಯಾಗಿದೆ ಎಂದು ಆಸ್ಪತ್ರೆಯ ಮೂಲಗಳು ಹೇಳಿವೆ.