ಕೋಟಾ ಶ್ರೀನಿವಾಸ ಪೂಜಾರಿಗೆ ಸಿಎಂ ಪಟ್ಟ : ಪ್ರಣವಾನಂದ ಸ್ವಾಮೀಜಿ ಒತ್ತಾಯ
ಕೊಪ್ಪಳ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತವಾಗುತ್ತಿದ್ದಂತೆ ಮುಂದಿನ ಸಿಎಂ ಯಾರು ಎಂಬ ಚರ್ಚೆ ರಾಜ್ಯದಲ್ಲಿ ಶುರುವಾಗಿದೆ.
ಈ ಮಧ್ಯೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಪ್ರಣವಾನಂದ ಸ್ವಾಮೀಜಿ ಒತ್ತಾಯ ಮಾಡಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿಗಳು, ಮುಖ್ಯಮಂತ್ರಿ ಬದಲಾವಣೆಯಾದ್ರೆ ಸಿಎಂ ಸ್ಥಾನವನ್ನು ಕೋಟಾ ಶ್ರೀನಿವಾಸ ಪೂಜಾರಿಗೆ ಕೊಡಬೇಕು.
ಇದು ನಮ್ಮ ಸಮಾಜದ ಆಗ್ರಹವಾಗಿದೆ. ಸರ್ಕಾರ ಇದುವರೆಗೂ ಆರ್ಯ ಇಡೀಗ ಸಮಾಜಕ್ಕೆ ನಿಗಮ ಮಂಡಳಿ ಘೋಷಣೆ ಮಾಡಿಲ್ಲ.
ಸಣ್ಣ ಸಣ್ಣ ಸಮಾಜಕ್ಕೆ ನಿಗಮ ಮಂಡಳಿ ಘೋಷಣೆ ಮಾಡಿದ್ದಾರೆ. ಕೂಡಲೇ ಸರ್ಕಾರ ಬ್ರಹ್ಮಶ್ರೀ ನಾರಾಯಣಸ್ವಾಮಿ ನಿಗಮ ಮಂಡಳಿ ಸ್ಥಾಪನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಅಲ್ಲದೆ ನಮ್ಮ ಮನವಿಗೆ ಸ್ಪಂದಿಸದೇ ಇದ್ದರೇ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ ಶ್ರೀಗಳು, ನಮ್ಮ ಸಮಾಜದ ಹುಲಿಗಳಾದ ಮಾಲೀಕಯ್ಯ ಗುತ್ತೆದಾರ, ಎಚ್.ಆರ್.ಶ್ರೀನಾಥ್ ನೇತೃತ್ವದಲ್ಲಿ ಹೋರಾಟ ನಡೆಸುತ್ತೇವೆ ಎಂದಿದ್ದಾರೆ.









