ಈಡಿಗ ಸಮುದಾಯದವರಿಗೆ ಮುಖ್ಯಮಂತ್ರಿ ಪಟ್ಟ

1 min read
B S Yediyurappa Saaksha_tv

ಈಡಿಗ ಸಮುದಾಯದವರಿಗೆ ಮುಖ್ಯಮಂತ್ರಿ ಪಟ್ಟ

ಶಿವಮೊಗ್ಗ : ಜುಲೈ 26ಕ್ಕೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಲಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಹೈಕಮಾಂಡ್ ಮುಂದಾಗಿದೆ ಎಂಬ ಸುದ್ದಿ ರಾಜ್ಯದಲ್ಲಿ ಸಂಚಲನವನ್ನು ಸೃಷ್ಟಿ ಮಾಡಿದೆ.

ಸಿಎಂ ಬದಲಾವಣೆ ಪಕ್ಕಾ ಆಗುತ್ತಿದ್ದಂತೆ ರಾಜ್ಯದ ಮಠಾಧೀಶರು ರಾಜಧಾನಿಯತ್ತ ಆಗಮಿಸುತ್ತಿದ್ದು, ಯಡಿಯೂರಪ್ಪ ಅವರಿಗೆ ಬಹಿರಂಗವಾಗಿ ಬೆಂಬಲ ಸೂಚಿಸುತ್ತಾ ಬಿಜೆಪಿ ಹೈಕಮಾಂಡ್ ಗೆ ಎಚ್ಚರಿಕೆಯ ಸಂದೇಸ ರವಾನಿಸುತ್ತಿದ್ದಾರೆ.

ಈ ಮಧ್ಯೆ ಕರ್ನಾಟಕದಲ್ಲಿ ಈಡಿಗ ಸಮುದಾಯದವರೊಬ್ಬರು ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಆರ್ಯ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

Pranavananda Swamiji  saaksha tv

ಬುಧವಾರ ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಡಿಗ ಸಮುದಾಯದ ಏಳು ಶಾಸಕರು ಇದ್ದಾರೆ. ಆದರೆ ಕೋಟಾ ಶ್ರೀನಿವಾಸ್ ಪೂಜಾರಿಯವರನ್ನು ಮಾತ್ರ ಸಚಿವರನ್ನಾಗಿ ಮಾಡಲಾಗಿದೆ. ನಮ್ಮ ಸಮುದಾಯಕ್ಕೆ ಉಪಮುಖ್ಯಮಂತ್ರಿ ಹುದ್ದೆ ಪಡೆಯುವ ಸಾಮಥ್ರ್ಯವಿದೆ.

ಈಡಿಗ ಸಮುದಾಯದ ಜನರಿಗೆ ಸಾಮಾಜಿಕ ಮತ್ತು ರಾಜಕೀಯ ನ್ಯಾಯವನ್ನು ನೀಡಿಲ್ಲ. ನಮ್ಮ ಸಮುದಾಯದ ಮುಖಂಡರೊಬ್ಬರು ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದರು.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd