ಡಿಜೆ ಹಳ್ಳಿ ಕೆಜಿ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣವನ್ನು ನಟಿ ಪ್ರಣಿತಾ ಸುಭಾಷ್ ಅವರು ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಣಿತಾ ಅವರು ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿಯಲ್ಲಿ ಮಂಗಳವಾರ ರಾತ್ರಿ ನಡೆದ ಹಿಂಸಾಚಾರವನ್ನು ಕನ್ನಡ ನಟಿ ಪ್ರಣಿತಾ ಸುಭಾಷ್ ಖಂಡಿಸಿದ್ದಾರೆ. ‘ಡಿಜೆ ಹಳ್ಳಿಯಲ್ಲಿ ನಿನ್ನೆ ನಡೆದ ಘಟನೆಗಳನ್ನು ನಾನು ಖಂಡಿಸುತ್ತೇನೆ. ಪೊಲೀಸ್ ಸ್ಟೇಷನ್ ಹಾಗು ಪತ್ರಕರ್ತರ ಮೇಲೆ ನಡೆದ ಹಲ್ಲೆ ಖಂಡನಾರ್ಹ!’ ಎಂದು ಪ್ರಣಿತಾ ಟ್ವೀಟ್ ಮಾಡಿದ್ದಾರೆ.
ಮಂಗಳವಾರ ತಡರಾತ್ರಿ ಡಿಜೆ ಹಳ್ಳಿ ಪೊಲೀಸ್ ಠಾಣೆ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ, ಠಾಣೆಗೆ ಹಾಗೂ ವಾಹನಗಳಿಗೆ ಬೆಂಕಿ ಇಟ್ಟಿದ್ದರು. ಅಲ್ಲದೇ ಪತ್ರಕರ್ತರು ಸಾರ್ವಜನಿಕರು ಹಾಗೂ ಪೊಲೀಸರ ಮೇಲೂ ಹಲ್ಲೆ ನಡೆಸಿ ಪುಂಡಾಟ ಮೆರೆದಿದ್ದರು. ಗಲಭೆ ನಿಯಂತ್ರಣಕ್ಕೆ ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ ಮೂವರು ಮೃತಪಟ್ಟಿದ್ದು, ಗುಂಡೇಟು ತಿಂದ ನಾಲ್ವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ ಪ್ರಕರಣ ಸಂಭಂಧ 150 ಜನರನ್ನ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.








