ಟಿಪ್ಪು ಎಕ್ಸ್ ಪ್ರೆಸ್ ಬದಲು ಮೈಸೂರಿನ ರೈಲಿಗೆ ಒಡೆಯರ್ ಎಕ್ಸಪ್ರೆಸ್ ಹೆಸರು ಇಡಲು ಮನವಿ : ಪ್ರತಾಪ್ ಸಿಂಹ Saaksha Tv
ಮೈಸೂರು: ಟಿಪ್ಪು ಎಕ್ಸ್ ಪ್ರೆಸ್ ಬದಲು ಮೈಸೂರಿನ ರೈಲಿಗೆ ಒಡೆಯರ್ ಎಕ್ಸಪ್ರೆಸ್ ಹೆಸರು ಇಡುವಂತೆ ಮನವಿ ಮಾಡಿದ್ದೇನೆಂದು ಮೈಸೂರಿನ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೈಸೂರಿಗೆ ಒಡೆಯರ್ ಕೊಡುಗೆಯನ್ನು ಅರಿತು ಟಿಪ್ಪು ಎಕ್ಸ್ಪ್ರೆಸ್ ಹೆಸರು ಬದಲಾವಣೆ ವಿಚಾರವಾಗಿ ಸಾಕಷ್ಟು ಜನ ಮನವಿ ಮಾಡಿದ್ದರು. ಒಡೆಯರ್ ಕೊಡುಗೆ ಅಪಾರವಾಗಿದೆ. ಮೈಸೂರಿಗೆ ರೈಲು ತಂದಿದ್ದು ಮೈಸೂರು ಮಹಾರಾಜರು ಅವರ ಹೆಸರಿನಲ್ಲಿ ಒಂದು ರೈಲು ಇಲ್ಲ. ಆ ವಂಶವನ್ನು ನಾಶ ಮಾಡಲು ಹೋದವನ ಹೆಸರು ರೈಲಿಗೆ ಯಾಕೆ? ಎಂದು ಪ್ರಶ್ನಿಸಿದರು.
ಟಿಪ್ಪು ಸುಲ್ತಾನ್ ಒಂದು ರೈಲು ಹಳಿ ಹಾಕಿಲ್ಲ. ಅಂತಹ ಟಿಪ್ಪು ಹೆಸರು ಯಾಕೆ ಬೇಕು. ಈ ಹೆಸರನ್ನು ಬದಲಾಯಿಸಿಯೇ ತೀರುತ್ತೇವೆ. ಟಿಪ್ಪು ಸುಲ್ತಾನ್ ಹೆಸರು ಇಡಬಾರದು. ಕ್ರೆಡಿಟ್ ಕೂಡ ಸೂಕ್ತ ವ್ಯಕ್ತಿಗೆ ನೀಡಬೇಕು ಎಂದಿದ್ದಾರೆ.
ಅಲ್ಲದೇ ರಾಜ್ಯ, ಜಿಲ್ಲೆಗಳನ್ನು ಮೆಚ್ಚಿಸಲು ಬಜೆಟ್ ಮಂಡಿಸಿಲ್ಲ. ಬದಲಾಗಿ ಇಡೀ ದೇಶವನ್ನು ಮೆಚ್ಚಿಸಲು ಬಜೆಟ್ ಮಂಡಿಸಿದ್ದಾರೆ. ಇಡೀ ದೇಶದ ಸಮಗ್ರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿ ಇಟ್ಟು ಕೊಂಡು ಬಜೆಟ್ ಮಂಡಿಸಲಾಗಿದೆ. ಎಲೆಕ್ಟ್ರಿಕ್ ರೈಲುಗಳ ಸಂಚಾರ ವ್ಯವಸ್ಥೆ ದೇಶದಲ್ಲಿ ಸಂಚಲನ ಹುಟ್ಟಿಸಲಿದೆ. ಈ ವರ್ಷ ಎಲೆಕ್ಟ್ರಿಕ್ ಟ್ರೈನ್ಗಳು ಸಂಚಾರ ಆರಂಭಿಸಲಿವೆ ಎಂದು ಹೇಳಿದರು.