ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣ ಸಂಬಂಧ ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ಅವರ ವಿರುದ್ಧದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಅಕ್ಟೋಬರ್ 12ಕ್ಕೆ ಮುಂದೂಡಿದೆ.
ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರ ಮನವಿ ಮೇರೆಗೆ ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆಯನ್ನು ಮುಂದೂಡಿದೆ.
ನಿಯತಕಾಲಿಕೆಗೆ ನೀಡಿದ ಸಂದರ್ಶನದಲ್ಲಿ ಕೆಲ ಹಾಲಿ ಹಾಗೂ ಮಾಜಿ ಉನ್ನತ ನ್ಯಾಯಾಲಯದ ನ್ಯಾಯಾಧೀಶರ ಮೇಲೆ ಆರೋಪ ಮಾಡಿದ್ದ ಹಿನ್ನೆಲೆ ಸುಪ್ರೀಂ ಕೋರ್ಟ್ 2009 ರ ನವೆಂಬರ್ನಲ್ಲಿ ಅಂದಿನ ತೆಹಲ್ಕಾ ನಿಯತಕಾಲಿಕೆಯ ಪ್ರಧಾನ ಸಂಪಾದಕ ತರುಣ್ ತೇಜ್ಪಾಲ್ ಹಾಗೂ ಪ್ರಶಾಂತ್ ಭೂಷಣ್ ಅವರಿಗೆ ನ್ಯಾಯಾಂಗ ನಿಂದನೆ ನೋಟೀಸ್ ನೀಡಿತ್ತು. ಇದೀಗ ಅಕ್ಟೋಬರ್ 12ಕ್ಕೆ ಮತ್ತೆ ವಿಚಾರಣೆಯನ್ನು ನ್ಯಾಯಾಲಾಯವು ಕೈಗೆತ್ತಿಕೊಳ್ಳಲಿದೆ.








