Prisidh Krishna : ಬುಮ್ರಾ ದಾಖಲೆ ಉಡೀಸ್ ಮಾಡಿದ ಪ್ರಸಿದ್ಧ್ ಕೃಷ್ಣ Prasidh-krihna-creates-history
ಟೀಂ ಇಂಡಿಯಾದ ಯುವ ವೇಗಿ ಪ್ರಸಿದ್ಧ್ ಕೃಷ್ಣ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.
ಟೀಂ ಇಂಡಿಯಾ ಪರ ಮೊದಲ ಏಳು ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಮೊದಲ ಬೌಲರ್ ಕೃಷ್ಣ.
ಪ್ರಸಿದ್ಧ್ ಕೃಷ್ಣ ಆಡಿರುವ ಏಳು ಏಕದಿನ ಪಂದ್ಯಗಳಲ್ಲಿ 18 ವಿಕೆಟ್ ಪಡೆದಿದ್ದಾರೆ.
ಇದಕ್ಕೂ ಮೊದಲು ಅಜಿತ್ ಅಗರ್ಕರ್ ಮತ್ತು ಬುಮ್ರಾ ಮೊದಲ ಏಳು ಏಕದಿನ ಪಂದ್ಯಗಳಲ್ಲಿ 16 ವಿಕೆಟ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರು.
ಆದ್ರೆ ಈಗ ಪ್ರಸಿದ್ಧ್ ಕೃಷ್ಣ ಈ ಇಬ್ಬರ ದಾಖಲೆ ಮುರಿದು ಮೊದಲ ಸ್ಥಾನದಲ್ಲಿದ್ದಾರೆ.
ಇನ್ನು ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಅಜಿತ್ ಅಗರ್ಕರ್ ಮತ್ತು ಬುಮ್ರಾ ಇದ್ದರೇ ಮೂರನೇ ಸ್ಥಾನದಲ್ಲಿ ಟೀಂ ಇಂಡಿಯಾದ ಮಾಜಿ ಆಟಗಾರ ಪ್ರವೀಣ್ ಕುಮಾರ್ 15 ವಿಕೆಟ್ ಪಡೆದಿದ್ದಾರೆ.
ನರೇಂದ್ರ ಹಿರ್ವಾನಿ, ಜಹೀರ್ ಖಾನ್ ಮತ್ತು ರವಿಚಂದ್ರನ್ ಅಶ್ವಿನ್ ತಲಾ 14 ವಿಕೆಟ್ ಪಡೆದು ನಾಲ್ಕನೇ ಸ್ಥಾನದಲ್ಲಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಪ್ರಸಿದ್ಧ ಕೃಷ್ಣ, ಮೂರು ಏಕದಿನ ಪಂದ್ಯಗಳಲ್ಲಿ ಒಂಬತ್ತು ವಿಕೆಟ್‌ಗಳನ್ನು ಪಡೆದರು. ಅಲ್ಲದೇ ಸರಣಿ ಶ್ರೇಷ್ಠ ಪ್ರಶಸ್ತಿಗೂ ಬಾಜನರಾದರು.
ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ 96 ರನ್ ಗಳ ಜಯ ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 265 ರನ್‌ಗಳಿಗೆ ಆಲೌಟ್ ಆಯಿತು.
ಶ್ರೇಯಸ್ ಅಯ್ಯರ್ 80 ರನ್ ಗಳಿಸಿದರೆ, ಪಂತ್ 56 ರನ್ ಗಳಿಸಿದರು. ನಂತರ ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ 37.1 ಓವರ್ ಗಳಲ್ಲಿ 169 ರನ್ ಗಳಿಗೆ ಪತನಗೊಂಡಿತು.









