ವಾಜಪೇಯಿ ಜನ್ಮದಿನ : ಗೋಶಾಲೆಯಲ್ಲಿ ಪ್ರತಾಪ್ ಸಿಂಹ ಶ್ರಮದಾನ
ಮೈಸೂರು : ಇಂದು ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ. ಈ ಹಿನ್ನೆಲೆ ಸಂಸದ ಪ್ರತಾಪ್ ಸಿಂಹ ಅಜಾತಶತ್ರುವಿನ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡಿ ಗೌರವ ಸಲ್ಲಿಸಿದ್ದಾರೆ.
ಹೌದು..! ಸಂಸದ ಪ್ರತಾಪ್ ಸಿಂಹ ಅವರು ಮೈಸೂರಿನ ಪಿಂಜರಾಪೋಲ್ ಗೋಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಗಣಿ ಬಾಚಿ ಗೋಪಾಲಕನಾಗಿ ಸೇವೆ ಸಲ್ಲಿಸಿದ್ದಾರೆ. ತಾವೇ ಗೋವಿನ ಮೈತೊಳೆದು ಮೇವು ತಿನ್ನಿಸಿ ಆರೈಕೆ ಮಾಡಿದ್ದಾರೆ.
ಪ್ರತಾಪ್ ಸಿಂಹ ಗೋಶಾಲೆಯಲ್ಲಿ ಶ್ರಮದಾನ ಮಾಡುವ ಮೂಲಕ ವಿಭಿನ್ನವಾಗಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಗೌರವ ಸಲ್ಲಿಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕೊಡವರು ಗೋಮಾಂಸ ತಿನ್ನುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ನಿಮ್ಮ ಅಕ್ಕ ಪಕ್ಕದಲ್ಲಿರುವ ಕೊಡವರು ಯಾರೋ ಗೋಮಾಂಸ ತಿನ್ನಬಹುದು.
ಆದ್ರೆ ಆ ಕಾರಣಕ್ಕೆ ಇಡೀ ಕೊಡವರನ್ನು ಗೋಮಾಂಸ ತಿನ್ನುತ್ತಾರೆ ಎಂದರೆ ಹೇಗೆ..? ನೀವು ಗೋಮಾಂಸ ತಿನ್ನುತ್ತೀರಿ ಅಂತ ಇಡೀ ಕುರುಬ ಸಮಾಜ ಬೀಫ್ ತಿನ್ನುತ್ತಾರೆ ಎಂದರೆ ಅದು ಸರಿಯೇ ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel