ಮಸೀದಿಗಳಲ್ಲಿ ಪ್ರಾರ್ಥನೆಗೆ ಅವಕಾಶ ಕೊಟ್ಟಂತೆ ಗಣೇಶೋತ್ಸವಕ್ಕೆ ಅವಕಾಶ ಕೊಡಿ pratap simha saaksha tv
ಮೈಸೂರು : ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡುವಂತೆ ಸಂಸದ ಪ್ರತಾಪ್ ಸಿಂಹ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಕೊರೊನಾ ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯದಲ್ಲಿ ಗಣೇಶೋತ್ಸವಕ್ಕೆ ನಿಬರ್ಂಧ ಹೇರಲಾಗಿದೆ.
ಇದಕ್ಕೆ ಶಾಸಕ ಯತ್ನಾಳ್, ಸಚಿವ ಸುನಿಲ್ ಕುಮಾರ್ ಬೇಸರ ಹೊರ ಹಾಕಿ ಗಣೇಶೋತ್ಸವಕ್ಕೆ ಅವಕಾಶ ಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಅದರಂತೆ ಇದೀಗ ಸಂಸದ ಪ್ರತಾಪ್ ಸಿಂಹ, “ರಾಜ್ಯದ ಮಸೀದಿಗಳಲ್ಲಿ ಶುಕ್ರವಾರ ಸಾಮೂಹಿಕ ನಮಾಜ್, ಚರ್ಚ್ ಗಳಲ್ಲಿ ಭಾನುವಾರ ಪ್ರಾರ್ಥನೆಗೆ ಅವಕಾಶ ಕೊಟ್ಟಿದ್ದು, ನಮಗೂ ಗಣೇಶೋತ್ಸವಕ್ಕೂ ಅವಕಾಶ ಕೊಡಲಿ ಎಂದು ಒತ್ತಾಯಿಸಿದ್ದಾರೆ.
ಗಣೇಶೋತ್ಸವ ಎನ್ನುವುದು ನಡಿಯಬೇಕು. ಅದ್ದೂರಿಯಾಗಿ ನಡೆಯಬೇಕು ಎಂದು ಹೇಳುತ್ತಿಲ್ಲ.
ಕೊರೊನಾ ನಿಯಮಾವಳಿ ಕಟ್ಟುನಿಟ್ಟಿನ ಅನುಷ್ಠಾನ ಮಾಡಿ ಗಣೇಶೋತ್ಸವಕ್ಕೆ ಅವಕಾಶ ಮಾಡಿಕೊಡಿ ಎಂದು ಬಸವರಾಜ ಬೊಮ್ಮಾಯಿ ಅವರಿಗೆ ಸಂಸದರು ಮನವಿ ಮಾಡಿದ್ದಾರೆ.









