ಕೊಡಗಿಗೆ ಮಂತ್ರಿ ಸ್ಥಾನ ಬೇಕೇ ಬೇಕು : ಪ್ರತಾಪ್ ಸಿಂಹ pratap-simha saaksha tv
ಮಡಿಕೇರಿ : ರಾಜ್ಯದಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ಮುಂದುವರೆದಿದೆ. ಶೀಘ್ರದಲ್ಲೇ ಸಚಿವ ಸಂಪುಟ ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಈ ಮಧ್ಯೆ ಕೊಡಗಿಗೆ ಮಂತ್ರಿ ಸ್ಥಾನ ಬೇಕೇ ಬೇಕು ಎಂದು ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಜಿ ಬೋಪಯ್ಯ ಅವರು ವಿಧಾನಸಭಾಧ್ಯಕ್ಷರಾಗಿದ್ದ ಸಂದರ್ಭ ಸರ್ಕಾರವನ್ನೇ ರಕ್ಷಿಸಿದ್ದಾರೆ. ಶಾಸಕ ಅಪ್ಪಚ್ಚು ರಂಜನ್ ಕೂಡ ಮಂತ್ರಿಯಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಕೊಡಗು ಸಣ್ಣ ಜಿಲ್ಲೆಯಾಗಿದ್ದರೂ ಬಿಜೆಪಿಯ ಭದ್ರಕೋಟೆಯಾಗಿದೆ. ಹೀಗಾಗಿ ಕೊಡಗಿಗೆ ಮಂತ್ರಿ ಸ್ಥಾನ ಬೇಕೇ ಬೇಕು ಎಂದು ಒತ್ತಾಯಿಸಿದ್ದಾರೆ.
ಇದೇ ವೇಳೆ ನೂತನ ಮುಖ್ಯಮಂತ್ರಿ ಬಗ್ಗೆ ಮಾತನಾಡಿ, ಬಸವರಾಜ ಬೊಮ್ಮಾಯಿ ಚಿಕ್ಕಂದಿನಿಂದಲೂ ರಾಜಕೀಯದ ಬೆಸುಗೆ ಹೊಂದಿದವರು. ತಂದೆ ಎಸ್.ಆರ್.ಬೊಮ್ಮಾಯಿ ಮುಖ್ಯಮಂತ್ರಿಯಾಗಿ ರಾಜ್ಯದಲ್ಲಿ ಹೇಗೆ ಅಧಿಕಾರ ನಿಭಾಯಿಸಿದರು ಎಂಬುದೂ ಬಸವರಾಜ ಅವರಿಗೆ ತಿಳಿದಿದೆ. ಶಾಂತಿಯುತವಾಗಿ ರಾಜ್ಯವನ್ನು ಮುನ್ನಡೆಸಲಿದ್ದಾರೆ ಎಂದು ಆಶಾ ಭಾವನೆ ವ್ಯಕ್ತಪಡಿಸಿದರು.