ಕಾಂಗ್ರೆಸ್ ನವರಂತೆ ನಾವು ನಮ್ಮ ಪಕ್ಷದವರ ಹೆಸರನ್ನು ಇಡುತ್ತಿಲ್ಲ : ಪ್ರತಾಪ್ ಸಿಂಹ Prathap simha saaksha tv
ಮೈಸೂರು : ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನದ ಹೆಸರು ಬದಲಾವಣೆ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ಮತ್ತೆ ಕಿಡಿಕಾರಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರಂತೆ ನಾವು ನಮ್ಮ ಪಕ್ಷದವರ ಹೆಸರನ್ನು ಇಡುತ್ತಿಲ್ಲ.
ಸೋನಿಯಾ ಗಾಂಧಿಯನ್ನು ಓಲೈಸಲು ಕಾಂಗ್ರೆಸ್ ಎಲ್ಲದಕ್ಕೂ ರಾಜೀವ್ ಗಾಂಧಿ ಹೆಸರು ಬಳಸಿತ್ತು. ನಮಗೆ ಆ ರೀತಿ ಅನಿವಾರ್ಯತೆ ಏನು ಇಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಇದೇ ವೇಳೆ ರಾಷ್ಟ್ರೀಯ ಉದ್ಯಾನವನಕ್ಕೂ ರಾಜೀವ್ ಗಾಂಧಿಗೂ ಏನು ಸಂಬಂಧ ಎಂದು ಪ್ರಶ್ನಿಸಿದ ಪ್ರತಾಪ್ ಸಿಂಹ, ಸಂಬಂಧವೇ ಇಲ್ಲದವರನ್ನು ಅನೇಕ ಕೇಂದ್ರ ಹಾಗೂ ಸಂಸ್ಥೆಗಳಿಗೆ ಹೆಸರಿಡಲಾಗಿದೆ.
ಹೀಗಾಗಿ ಇದನ್ನು ಬದಲಾಯಿಸಲು ಮುಂದಾಗಿದ್ದೇವೆ. ಮೈಸೂರು ವಿಮಾನ ನಿಲ್ದಾಣಕ್ಕೆ ಜಯಚಾಮರಾಜೇಂದ್ರ ಒಡೆಯರ್ ಹೆಸರು ಇಡುತ್ತಿದ್ದೇವೆ.
ರೈಲ್ವೆ ನಿಲ್ದಾಣಕ್ಕೂ ರಾಜ ಮನೆತನದವರ ಹೆಸರು ಇಡುತ್ತಿದ್ದೇವೆ ಎಂದು ತಮ್ಮ ನಡೆಯನ್ನು ಸಮರ್ಥಸಿಕೊಂಡಿದ್ದಾರೆ.









