ಪ್ರವೀಣ್ ಕೊಲೆ ಪ್ರಕರಣ – ಬಂಧಿತ ಅರೋಪಿಗಳು ಕೆಲಸ ಮಾಡುತ್ತಿದ್ದ ಅಂಗಡಿಗೆ ಮುತ್ತಿಗೆ..
ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಣಿ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಯಾಗದಿ 1 ದಿನ ಕಳೆದಿದೆ. ಪ್ರಕರಣದಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.
ಸವಣೂರು ಮೂಲದ ಝಕೀರ್ (29) ಮತ್ತು ಶಫೀಕ್ ಬೆಳ್ಳಾರೆ (27) ಬಂಧಿತ ಆರೋಪಿಗಳು. ಝಾಕೀರ್ ಸವಣೂರು ಎಸ್‌ಡಿಪಿಐ ಗ್ರಾಮ ಸಮಿತಿ ಮುಖಂಡನಾಗಿದ್ದು, ಶಫೀಕ್ ಎಸ್‌ಡಿಪಿಐ ಪಕ್ಷದ ಸಕ್ರೀಯ ಕಾರ್ಯಕರ್ತ. ಬೆಳ್ಳಾರೆ, ಸುಳ್ಯದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾರ್ಯಕರ್ತರನ್ನ ಬಂಧಿಸಲಾಗಿದ್ದು ನ್ಯಾಯಲಯಕ್ಕೆ ಹಾಜರು ಮಾಡುತ್ತೇವೆ ಎಂದು ದಕ್ಷಿಣ ಕನ್ನಡ ಎಸ್‌ಪಿ ಋಷಿಕೇಷ್ ಸೋನಾವಣೆ ಮಾಹಿತಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಒಟ್ಟು 21 ಮಂದಿಯನ್ನ ವಶಕ್ಕೆ ಪಡೆಯಲಾಗಿದೆ.
ಪ್ರವೀಣ್ ಹತ್ಯೆ ಸಂಬಂಧ ಇಬ್ಬರ ಬಂಧನವಾಗುತ್ತಿದ್ದಂತೆ ಬಂಧಿತ ಆರೋಪಿಗಳು ಕೆಲಸ ಮಾಡುತ್ತಿದ್ದ ಅಂಗಡಿಗೆ ಮುತ್ತಿಗೆ ಹಾಕಿದ ಪ್ರಸಂಗ ನಡೆದಿದೆ. ಸುಳ್ಯ ತಾಲೂಕಿನ ಗುತ್ತಿಗಾರು ಎಂಬಲ್ಲಿ ಆರೋಪಿ ಶಫೀಕ್ ಬೆಳ್ಳಾರೆ ಕೆಲಸ ಮಾಡುತ್ತಿದ್ದ. ಇದೀಗ ಈತನ ಬಂಧನವಾಗುತ್ತಿದ್ದಂತೆಯೇ ಸಾರ್ವಜನಿಕರು ಅಡಿಕೆ ಅಂಗಡಿಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದ್ದಾರೆ. ಸಾರ್ವಜನಿಕರು ಅಂಗಡಿಗೆ ಮುತ್ತಿಗೆ ಹಾಕುತ್ತಿದ್ದಂತೆಯೇ ಪೊಲೀಸರು ಮಧ್ಯಪ್ರವೇಶ ಮಾಡಿದ್ದಾರೆ.








