ಪ್ರವೀಣ್ ನೆಟ್ಟಾರು ಪ್ರಕರಣ – ಶಾಸಕರನ್ನ ತರಾಟೆಗೆ ತೆಗೆದುಕೊಂಡ ಪ್ರವೀಣ್ ಪತ್ನಿ
ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಣಿ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಯಾಗದಿ 1 ದಿನ ಕಳೆದಿದೆ. ಪ್ರಕರಣದಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.
ಇದೇ ವೇಳೆ ಪ್ರವೀಣ್ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಕುಟುಂಬಸ್ಥರ ಆಕ್ರೋಶಕ್ಕೆ ಗುರಿಯಾಗಬೇಕಾಯಿತು. ಪಕ್ಷಕ್ಕಾಗಿ ದುಡಿದ ಪತಿಗೆ ಏನು ಸಿಕ್ಕಿತು ಎಂದು ಪ್ರವೀಣ್ ಪತ್ನಿ ನೂತನ ಶಾಸಕರನ್ನು ತರಾಟೆಗೆ ತೆಗೆದುಕೊಂಡರು. “ಅವರು ಯಾವಾಗಲೂ ನಳಿನಣ್ಣ ಅಂಗಾರಣ್ಣ ಮತ್ತು ಸಂಜೀವಣ್ಣ ಅವರ ಪರವಾಗಿ ಕೆಲಸ ಮಾಡುತ್ತಿದ್ದರು. ನಮಗೆ ಯಾವುದೇ ಪರಿಹಾರ ಬೇಡ, ಇಲ್ಲಿಯವರೆಗೆ ತಪ್ಪಿತಸ್ಥರನ್ನು ಏಕೆ ಬಂಧಿಸಿಲ್ಲ ಎಂದು ನೂತನ ಅವರು ತರಾಟೆಗೆ ತೆಗೆದುಕೊಂಡರು.
ಇನ್ನೂ ನಿನ್ನೆ ಬೆಳ್ಳಾರೆಯಲ್ಲಿ ನಿನ್ನೆ ಪ್ರವೀಣ್ ಅವರ ಅಂತ್ಯಕ್ರಿಯೆಯ ವೇಳೆ ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ಮಾಡಿದ ಪೊಲೀಸರನ್ನ ವಿಎಚ್‌ಪಿ ಮತ್ತು ಬಜರಂಗದಳದ ಮುಖಂಡರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಲಾಠಿ ಚಾರ್ಜ್‌ಗೆ ಆದೇಶ ನೀಡಿದ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿ ಪ್ರವೀಣ್ ಹತ್ಯೆ ಘಟನೆಯ ಬಗ್ಗೆ ಎನ್‌ಐಎ ಅಥವಾ ಎಸ್‌ಐಟಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಕಾರ್ಯಕರ್ತರ ಹತ್ಯಯಿಂದಾಗಿ ಭುಗಿಲೆದ್ದ ಬಿಜೆಪಿ ಸದಸ್ಯರ ಆಕ್ರೋಶ ಇನ್ನೂ ತಣಿದಿಲ್ಲ. ಕಾರ್ಯಕರ್ತರ ಆಕ್ರೋಶಕ್ಕೆ ಬೆದರಿದ ಸರ್ಕಾರ ದೊಡ್ಡಬಳ್ಳಾಪುರದಲ್ಲಿ ನಡೆಸಲು ಆಯೋಜಿಸಿದ್ದ ಜನೋತ್ಸವ ಕಾರ್ಯಕ್ರಮವನ್ನ ರದ್ದು ಮಾಡಿದೆ.








