ಹಿಂದೂ ಕಾರ್ಯಕರ್ತ , ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಭೀಕರ ಹತ್ಯೆ ಪ್ರಕರಣದ ಆಕ್ರೋಶ ಕರಾವಳಿಯನ್ನ ಕಾದ ಕೆಂಡವಾಗಿಸಿದೆ..
ಬಿಜೆಪಿ ಸರ್ಕಾರದ ವಿರುದ್ಧ ಬಿಜೆಪಪಿ ಕಾರ್ಯಕರ್ತರು , ಹಿಂದೂ ಸಂಘಟನಾ ಕಾರ್ಯಕರ್ತರು ತಿರುಗಿಬಿದ್ದಿದ್ದಾರೆ..
ರಾಜ್ಯದ ಮೂಲೆ ಮೂಲೆಯಲ್ಲಿ ಆಕ್ರೋಶ ಭುಗಿಲೆದ್ದಿದೆ..
ಇನ್ನೂ ಅನೇಕ ಬಿಜೆಪಿ ಕಾರ್ಯಕರ್ತರು ರಾಜೀನಾಮೆ ನೀಡ್ತಿದ್ದಾರೆ.. ಇದೀಗ ಕಾರ್ಯಕರ್ತರು ರಾಜೀನಾಮೆ ನೀಡುತ್ತಿರುವುದಕ್ಕೆ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಪ್ರತಿಕ್ರಿಯಿಸಿದ್ದು ,
ಸಿದ್ದರಾಮಯ್ಯ, ಜಮೀರ್ರಂತಹ ರಾಜಕಾರಣಿಗಳು ಯಾವ ರೀತಿ ಕುಮ್ಮಕ್ಕು ನೀಡಲಾಗುತ್ತಿದೆ ಹಿಂದೂಗಳು ಗಮನಿಸಬೇಕು. ಯಾರ ಮೇಲೆ ಹಿಂದೆ ಹತ್ಯೆಯ ಕೇಸಿತ್ತೋ ಅವರ ಮೇಲಿನ FIR ರದ್ದು ಮಾಡಲಾಗಿತ್ತು. ರಾಜಸ್ಥಾನದಲ್ಲೂ ಕನ್ಹಯ್ಯ ಲಾಲ್ ಹತ್ಯೆ ಮಾಡಲಾಯಿತು. ಈ ರೀತಿ ಆಗುತ್ತಾ ಹೋದರೆ ಸಾಮಾನ್ಯ ಜನರಿಗೂ ಭದ್ರತೆ ನೀಡಲು ಸಾಧ್ಯವಾ. ಇದು ಮತಾಂಧತೆ ಮತ್ತು ಸಿದ್ಧಾಂತದ ಸಮಸ್ಯೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ..
ಹಿಂದೂಗಳ ಹತ್ಯೆಯನ್ನು ಕಾಂಗ್ರೆಸ್ ರಾಜಕೀಯ ಪ್ರಯೋಗ ಮಾಡುತ್ತಿದೆ. ವ್ಯಕ್ತಿಯ ಹತ್ಯೆ ಎನ್ನುವುದು ರಾಜಕೀಯ ಪ್ರಯೋಗನಾ ಎಂದು ಕಿಡಿಕಾರಿದ್ದಾರೆ.. ಇನ್ನೂ ಬಿಜೆಪಿ ಈ ರೀತಿಯ ಪ್ರಯೋಗ ಮಾಡಲ್ಲ. ಕಾರ್ಯಕರ್ತರ ಆಕ್ರೋಶ ಪಕ್ಷದ ಮೇಲೆ ಅಲ್ಲ. ಹಿಂದೂ ಸಮಾಜ ಹೋಗುತ್ತಿರುವ ದಿಕ್ಕು ನೋಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಾನು ಎಲ್ಲರಿಗೂ ಮನವಿ ಮಾಡುತ್ತೇನೆ, ಯಾರು ರಾಜೀನಾಮೆ ನೀಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ..
ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರುರನ್ನ ದುಷ್ಕರ್ಮಿಗಳ ಬರ್ಬರವಾಗಿ ಹತ್ಯೆಗೈದಿದ್ದರು. ಆನಂತರದಿಂದ ರಾಜ್ಯದ ಮೂಲೆ ಮೂಲೆಯಲ್ಲಿ ಆಕ್ರೋಶ ಭುಗಿಲೆದ್ದಿದೆ.. ಬಿಜೆಪಿ ಕಾರ್ಯಕರ್ತರು ಹಿಂದೂ ಕಾರ್ಯಕರ್ತರು ಸರ್ಕಾರದ ವಿರುದ್ಧವೇ ತಿರುಗಿಬಿದ್ದಿದ್ದಾರೆ,.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ 31 ವರ್ಷದ ಪ್ರವೀಣ್ ಕುಮಾರ್ ನೆಟ್ಟಾರು , ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು.. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.
ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಸರಣಿ ಸಾವಿನಿಂದಾಗಿ ಹಿಂದೂ ಪರ ಹೋರಾಟಗಾರರು ಜೊತೆಗೆ ಬಿಜೆಪಿ ಕಾರ್ಯಕರ್ತರೂ ಸರ್ಕಾರದ ವಿರುದ್ಧ ಆಕ್ರೋಸ ಹೊರಹಾಕುತ್ತಾ ಪ್ರತಿಭಟನೆಗಳನ್ನ ಮಾಡ್ತಿದ್ದು , ದಕ್ಷಿಣ ಕನ್ನಡದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ..








