ಹಿಂದೂ ಕಾರ್ಯಕರ್ತ , ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಭೀಕರ ಹತ್ಯೆ ಪ್ರಕರಣ ಇಡೀ ದಕ್ಷಿಣ ಕನ್ನಡದಲ್ಲಿ ಆಕ್ರೋಶದ ಕಿಚ್ಚು ಹೆಚ್ಚಿಸಿದೆ.. ಹಿಂದೂ ಕಾರ್ಯಕರ್ತರು , ಬಿಜೆಪಿ ಕಾರ್ಯಕರ್ತರು ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧವೇ ಕೆಂಡ ಕಾರುತತ್ತಿದ್ದಾರೆ.. ಕರಾವಳಿ ಕಾದ ಕೆಂಡದಂತಾಗಿದೆ..
ಕುಟುಂಬದವರು , ಸ್ನೇಹಿತರು , ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.. ಪ್ರವೀಣ್ ತಂದೆ ಆಘಾತಕ್ಕೆ ಒಳಗಾಗಿದ್ದು ಇದೀಗ ಅಸ್ವಸ್ಥರಾಗಿದ್ದಾರೆ. ಶೇಖರ ಪೂಜಾರಿ ಅವರು ಅಸ್ವಸ್ಥಗೊಂಡಿದ್ದು,ಅವರನ್ನ ಚಿಕಿತ್ಸೆಗಾಗಿ ಬೆಳ್ಳಾರೆಯ ಭಾರಧ್ವಾಜ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಶೇಖರ ಪೂಜಾರಿ ಅವರು ಹೃದ್ರೋಗದಿಂದ ಬಳಲುತ್ತಿದ್ದಾರೆ. ಇಸಿಜಿ ಮಾಡಿಸುವ ಸಲುವಾಗಿ ಶೇಖರ ಪೂಜಾರಿ ಅವರನ್ನು ಬೆಳ್ಳಾರೆಯ ಭಾರದ್ವಾಜ ಆಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ಕರೆದೊಯ್ಯಲಾಯಿತು..
ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರುರನ್ನ ದುಷ್ಕರ್ಮಿಗಳ ಬರ್ಬರವಾಗಿ ಹತ್ಯೆಗೈದಿದ್ದರು. ಆನಂತರದಿಂದ ರಾಜ್ಯದ ಮೂಲೆ ಮೂಲೆಯಲ್ಲಿ ಆಕ್ರೋಶ ಭುಗಿಲೆದ್ದಿದೆ.. ಬಿಜೆಪಿ ಕಾರ್ಯಕರ್ತರು ಹಿಂದೂ ಕಾರ್ಯಕರ್ತರು ಸರ್ಕಾರದ ವಿರುದ್ಧವೇ ತಿರುಗಿಬಿದ್ದಿದ್ದಾರೆ,.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ 31 ವರ್ಷದ ಪ್ರವೀಣ್ ಕುಮಾರ್ ನೆಟ್ಟಾರು , ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು.. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.
ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಸರಣಿ ಸಾವಿನಿಂದಾಗಿ ಹಿಂದೂ ಪರ ಹೋರಾಟಗಾರರು ಜೊತೆಗೆ ಬಿಜೆಪಿ ಕಾರ್ಯಕರ್ತರೂ ಸರ್ಕಾರದ ವಿರುದ್ಧ ಆಕ್ರೋಸ ಹೊರಹಾಕುತ್ತಾ ಪ್ರತಿಭಟನೆಗಳನ್ನ ಮಾಡ್ತಿದ್ದು , ದಕ್ಷಿಣ ಕನ್ನಡದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ..








