ಕೊಪ್ಪಳ : ಹಿಂದೂ ಕಾರ್ಯಕರ್ತ , ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಭೀಕರ ಹತ್ಯೆ ಪ್ರಕರಣದ ಆಕ್ರೋಶ ಕರಾವಳಿಯನ್ನ ಕಾದ ಕೆಂಡವಾಗಿಸಿದೆ..
ಬಿಜೆಪಿ ಸರ್ಕಾರದ ವಿರುದ್ಧ ಬಿಜೆಪಪಿ ಕಾರ್ಯಕರ್ತರು , ಹಿಂದೂ ಸಂಘಟನಾ ಕಾರ್ಯಕರ್ತರು ತಿರುಗಿಬಿದ್ದಿದ್ದಾರೆ..
ರಾಜ್ಯದ ಮೂಲೆ ಮೂಲೆಯಲ್ಲಿ ಆಕ್ರೋಶ ಭುಗಿಲೆದ್ದಿದೆ..
ಕೊಪ್ಪಳದಲ್ಲಿ ಕಾರ್ಯಕರ್ತರ ಅಸಮಾಧಾನ ಭುಗಿಲೆದ್ದಿದ್ದು ರಾಜಿನಾಮೆ ಸಲ್ಲಿಕೆ ಪರ್ವ ಮುಂದುವರೆದಿದೆ..
ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕ ಯುವಮೋರ್ಚಾ ಅಧ್ಯಕ್ಷ ಉಮೇಶ ಯಾದವ ರಾಜಿನಾಮೆ ನೀಡಿದ್ಧಾರೆ.
ಯುವಮೋರ್ಚಾ ತಂಡದೊಂದಿಗೆ ತಮ್ಮ ಸ್ಥಾನಕ್ಕೆ ಹಾಗೂ ಪಕ್ಷಕ್ಕೆ ರಾಜಿನಾಮೆ ಸಲ್ಲಿಸಿರುವುದಾಗಿ ಹೇಳಿಕೊಂಡಿದ್ದಾರೆ.
ಹತ್ಯೆಯಾದ ಪ್ರವೀಣ್ ಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ರಾಜಿನಾಮೆ ನೀಡಿದ್ದಾರೆ..
ಈ ಹಿಂದೆ ಬಿಜೆಪಿಯಲ್ಲಿದ್ದ ತತ್ವ ಸಿದ್ಧಾಂತಗಳು ಈಗ ಕಾಣುತ್ತಿಲ್ಲ ಎಂದು ಅಸಮಧಾನ ಹೊರಹಾಕಿದ್ದಾರೆ..
ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರುರನ್ನ ದುಷ್ಕರ್ಮಿಗಳ ಬರ್ಬರವಾಗಿ ಹತ್ಯೆಗೈದಿದ್ದರು. ಆನಂತರದಿಂದ ರಾಜ್ಯದ ಮೂಲೆ ಮೂಲೆಯಲ್ಲಿ ಆಕ್ರೋಶ ಭುಗಿಲೆದ್ದಿದೆ.. ಬಿಜೆಪಿ ಕಾರ್ಯಕರ್ತರು ಹಿಂದೂ ಕಾರ್ಯಕರ್ತರು ಸರ್ಕಾರದ ವಿರುದ್ಧವೇ ತಿರುಗಿಬಿದ್ದಿದ್ದಾರೆ,.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ 31 ವರ್ಷದ ಪ್ರವೀಣ್ ಕುಮಾರ್ ನೆಟ್ಟಾರು , ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು.. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.
ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಸರಣಿ ಸಾವಿನಿಂದಾಗಿ ಹಿಂದೂ ಪರ ಹೋರಾಟಗಾರರು ಜೊತೆಗೆ ಬಿಜೆಪಿ ಕಾರ್ಯಕರ್ತರೂ ಸರ್ಕಾರದ ವಿರುದ್ಧ ಆಕ್ರೋಸ ಹೊರಹಾಕುತ್ತಾ ಪ್ರತಿಭಟನೆಗಳನ್ನ ಮಾಡ್ತಿದ್ದು , ದಕ್ಷಿಣ ಕನ್ನಡದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ..








