ಹಿಂದೂ ಕಾರ್ಯಕರ್ತ , ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಭೀಕರ ಹತ್ಯೆ ಪ್ರಕರಣದ ಆಕ್ರೋಶ ಕರಾವಳಿಯನ್ನ ಕಾದ ಕೆಂಡವಾಗಿಸಿದೆ..
ಬಿಜೆಪಿ ಸರ್ಕಾರದ ವಿರುದ್ಧ ಬಿಜೆಪಪಿ ಕಾರ್ಯಕರ್ತರು , ಹಿಂದೂ ಸಂಘಟನಾ ಕಾರ್ಯಕರ್ತರು ತಿರುಗಿಬಿದ್ದಿದ್ದಾರೆ..
ರಾಜ್ಯದ ಮೂಲೆ ಮೂಲೆಯಲ್ಲಿ ಆಕ್ರೋಶ ಭುಗಿಲೆದ್ದಿದೆ..
ಇದೀಗ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಈ ಬಗ್ಗೆ ಪ್ರತಿಕ್ರಿಯಿಸುತ್ತಾ , ಪ್ರತಿ ಜಿಲ್ಲೆಯಿಂದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರವೀಣ್ ಕುಟುಂಬಕ್ಕೆ ಸಹಾಯ ಮಾಡಲಿದೆ ಎಂದಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡುತ್ತಾ ನಿನ್ನೆ ಬಿಜೆಪಿ ಯುವ ಮೋರ್ಚಾದ ಸದಸ್ಯ ಪ್ರವೀಣ್ ಹತ್ಯೆಯಾಗಿದೆ. ಇಡೀ ರಾಜ್ಯದಲ್ಲಿ ಬೇಸರ, ದುಃಖ, ಅಸಹಾಯಕತೆ, ಆಕ್ರೋಶದ ಭಾವನೆ ಮೂಡಿಸಿದೆ.
ಪ್ರವೀಣ್ ಒಂಬತ್ತು ತಿಂಗಳ ಮಗುವಿನ ತಂದೆಯಾಗಿದ್ದರು. ಯಾವುದೇ ತಪ್ಪಿಲ್ಲದಿದ್ದರೂ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತ ಎನ್ನುವ ಕಾರಣಕ್ಕೆ ಹತ್ಯೆ ಮಾಡಲಾಗಿದೆ. ಈ ಆಘಾತ ಸಹಿಸಲು ಕುಟುಂಬಕ್ಕೆ ಶಕ್ತಿ ಕೊಡಲಿ. ನಮ್ಮ ಪ್ರತಿಯೊಬ್ಬ ಕಾರ್ಯಕರ್ತ ಅವರ ಜೊತೆಗಿದ್ದಾರೆ ಎಂದರು.
ಹಿರಿಯ ನಾಯಕರ ಜೊತೆಗೆ ಮಾತನಾಡಿದ್ದೇವೆ. ಈ ಸರಣಿ ಹತ್ಯೆ ಹಿಂದಿರುವ ಗುಂಪು ಪತ್ತೆ ಹಚ್ಚಲು ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದೇವೆ ಎಂದು ತಿಳಿಸಿದರು.
ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರುರನ್ನ ದುಷ್ಕರ್ಮಿಗಳ ಬರ್ಬರವಾಗಿ ಹತ್ಯೆಗೈದಿದ್ದರು. ಆನಂತರದಿಂದ ರಾಜ್ಯದ ಮೂಲೆ ಮೂಲೆಯಲ್ಲಿ ಆಕ್ರೋಶ ಭುಗಿಲೆದ್ದಿದೆ.. ಬಿಜೆಪಿ ಕಾರ್ಯಕರ್ತರು ಹಿಂದೂ ಕಾರ್ಯಕರ್ತರು ಸರ್ಕಾರದ ವಿರುದ್ಧವೇ ತಿರುಗಿಬಿದ್ದಿದ್ದಾರೆ,.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ 31 ವರ್ಷದ ಪ್ರವೀಣ್ ಕುಮಾರ್ ನೆಟ್ಟಾರು , ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು.. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.
ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಸರಣಿ ಸಾವಿನಿಂದಾಗಿ ಹಿಂದೂ ಪರ ಹೋರಾಟಗಾರರು ಜೊತೆಗೆ ಬಿಜೆಪಿ ಕಾರ್ಯಕರ್ತರೂ ಸರ್ಕಾರದ ವಿರುದ್ಧ ಆಕ್ರೋಸ ಹೊರಹಾಕುತ್ತಾ ಪ್ರತಿಭಟನೆಗಳನ್ನ ಮಾಡ್ತಿದ್ದು , ದಕ್ಷಿಣ ಕನ್ನಡದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ..








