Praveen Nettaru Murder case | ಆ.16ರವರೆಗೂ ಪೊಲೀಸ್ ಕಸ್ಟಡಿಗೆ ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳು
ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳನ್ನು ಗುರುವಾರ ಪೊಲೀಸರು ಬಂಧಿಸಿದ್ದರು.
ಇದೀಗ ಆ ಆರೋಪಿಗಳನ್ನು ಸುಳ್ಯ ನ್ಯಾಯಲಯವು ಆಗಸ್ಟ್ 16ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ನೀಡಿದೆ.
ಪ್ರವೀಣ್ ಕೊಲೆ ಪ್ರಕರಣ ಸಂಬಂಧ ಪೊಲೀಸರು, ಸುಳ್ಯ ನಿವಾಸಿಗಳಾದ ಶಿಯಾಬುದ್ದೀನ್, ರಿಯಾಜ್ ಅಂಕತಡ್ಕ, ಎಲಿಮೆಲೆ ನಿವಾಸಿ ಬಶೀರ್ ಅವರನ್ನು ಬಂಧಿಸಿದ್ದರು.

ಅಲ್ಲದೇ ಪ್ರವೀಣ್ ರ ಅಕ್ಷಯ್ ಚಿಕಿನ್ ಸೆಂಟರ್ ಬಳಿ ಸೇರಿದಂತೆ ಹಲವು ಕಡೆ ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದ್ದರು.
ಅದಾದ ಬಳಿಕ ಪೊಲೀಸರು ಗುರುವಾರ ಸಂಜೆ ಆರೋಪಿಗಳನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಅಲ್ಲದೇ ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ತಮ್ಮ ಕಸ್ಟಡಿಗೆ ನೀಡುವಂತೆ ಪೊಲೀಸ್ ಅಧಿಕಾರಿಗಳು, ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು.
ಈ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು ಆರೋಪಿಗಳನ್ನು ಆಗಸ್ಟ್ 16ರವರೆಗೂ ಪೊಲೀಸ್ ಕಸ್ಟಡಿಗೆ ನೀಡಿದೆ.