ಹಿಂದೂ ಕಾರ್ಯಕರ್ತರು ಧೈರ್ಯ ಕಳೆದುಕೊಳ್ಳಬೇಡಿ ಎಂದು ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿ ಕರೆ ಕೊಟ್ಟಿದ್ದಾರೆ..
ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರುರನ್ನ ದುಷ್ಕರ್ಮಿಗಳ ಬರ್ಬರವಾಗಿ ಹತ್ಯೆಗೈದಿದ್ದರು. ಆನಂತರದಿಂದ ರಾಜ್ಯದ ಮೂಲೆ ಮೂಲೆಯಲ್ಲಿ ಆಕ್ರೋಶ ಭುಗಿಲೆದ್ದಿದೆ.. ಬಿಜೆಪಿ ಕಾರ್ಯಕರ್ತರು ಹಿಂದೂ ಕಾರ್ಯಕರ್ತರು ಸರ್ಕಾರದ ವಿರುದ್ಧವೇ ತಿರುಗಿಬಿದ್ದಿದ್ದಾರೆ,.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ 31 ವರ್ಷದ ಪ್ರವೀಣ್ ಕುಮಾರ್ ನೆಟ್ಟಾರು , ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು.. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.
ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಸರಣಿ ಸಾವಿನಿಂದಾಗಿ ಹಿಂದೂ ಪರ ಹೋರಾಟಗಾರರು ಜೊತೆಗೆ ಬಿಜೆಪಿ ಕಾರ್ಯಕರ್ತರೂ ಸರ್ಕಾರದ ವಿರುದ್ಧ ಆಕ್ರೋಸ ಹೊರಹಾಕುತ್ತಾ ಪ್ರತಿಭಟನೆಗಳನ್ನ ಮಾಡ್ತಿದ್ದು , ದಕ್ಷಿಣ ಕನ್ನಡದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ..