Praveen Nettaru – ಬಿಜೆಪಿ ಕಾರ್ಯಕರ್ತನ ಹತ್ಯೆ ಖಂಡಿಸಿ ಸ್ವಂ ಪ್ರೇರಿತ ಬಂದ್…..
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್ (32) ಹತ್ಯೆ ಪ್ರಕರಣ ಖಂಡಿಸಿ ಇಂದು ಪುತ್ತೂರು, ಸುಳ್ಯ, ಕಡಬ, ಉಪ್ಪಿನಂಗಡಿ ನೆಲ್ಯಾಡಿ ಪ್ರದೇಶಗಳಲ್ಲಿ ಸ್ವಯಂ ಪ್ರೇರಿತ ಬಂದ್ ಗೆ ಕರೆ ನೀಡಲಾಗಿದೆ. ಬಂದ್ ಕರೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪುತ್ತೂರು ಭಾಗದ ಕೆಲವು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪೊಲೀಸರು ಬಿಗಿ ಬಂದೋಬಸ್ತ್ ಆಯೋಜಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಬರ್ಬರ ಹತ್ಯೆಯನ್ನು ತೀವ್ರವಾಗಿ ಖಂಡಿಸಿದ್ದು, ಹಂತಕರನ್ನು ಶೀಘ್ರವೇ ಬಂಧಿಸಿ ಕಾನೂನಿನಡಿ ಕಠಿಣ ಶಿಕ್ಷೆಗೆ ಒಳಪಡಿಸಲಾಗುವುದು ಎಂದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು.








