ದೇವಸ್ಥಾನದ ಹುಂಡಿ ಕಳ್ಳತನಕ್ಕೂ ಮುನ್ನ ಕಳ್ಳನೊಬ್ಬ ದೇವರಲ್ಲಿ ಪ್ರಾರ್ಥಿಸಿರುವ ವಿಡಿಯೋವೊಂದು ಸೆರೆಯಾಗಿದೆ.
ರಾಜಸ್ಥಾನದ ಅಲ್ವಾರ್ನ ವ್ಯಕ್ತಿಯೊಬ್ಬ ದೇವಸ್ಥಾನಕ್ಕೆ ನುಗ್ಗಿ ಪೂಜೆ ಸಲ್ಲಿಸಿದ ನಂತರ ಹಣ, ವಸ್ತುಗಳನ್ನು ದೋಚಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಳ್ಳತನ ಮಾಡಿರುವ ಆರೋಪಿಯನ್ನು ಗೋಪೇಶ್ ಶರ್ಮಾ (37) ಎಂದು ಗುರುತಿಸಲಾಗಿದೆ.
ದೇವಸ್ಥಾನದ ಬೀಗ ಒಡೆದು ಬೆಳ್ಳಿ ಆಭರಣ, ಛತ್ರಿ, ಕಾಣಿಕೆ ಹುಂಡಿಯಲ್ಲಿದ್ದ ಹಣ ಸೇರಿದಂತೆ ಮತ್ತಿತರ ವಸ್ತುಗಳನ್ನು ಕಳ್ಳತನ ಮಾಡಿದ್ದಾನೆ ಎನ್ನಲಾಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಆರೋಪಿ ಗೋಪೇಶ್ ಶರ್ಮಾನನ್ನು ಬಂಧಿಸಿದ್ದಾರೆ.