Uttarapradesha: ಗರ್ಭಿಣಿ ಮಹಿಳೆ ಮೇಲೆ ಅತ್ಯಾಚಾರ – ಸಂತ್ರಸ್ಥೆಯ ಸ್ಥಿತಿ ಚಿಂತಾಜನಕ
ಉತ್ತರ ಪ್ರದೇಶದ ಬರೇಲಿಯಲ್ಲಿ ಗರ್ಭಿಣಿ ಮಹಿಳೆಯ ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಸಂತ್ರಸ್ತೆಯನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಸೆಪ್ಟೆಂಬರ್ 13 ರಂದು ಮಜ್ಗವಾನ್ ಗ್ರಾಮದ ಬಿಷರತ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 3 ತಿಂಗಳ ಗರ್ಭಿಣಿ ಮಹಿಳೆ ಯಾವುದೋ ಕೆಲಸಕ್ಕಾಗಿ ಜಮೀನಿಗೆ ಹೋಗಿದ್ದಾಗ ಆರೋಪಿಗಳು ಅತ್ಯಾಚಾರವೆಸಗಿ ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ.
ಮಹಿಳೆ ಬಹಳ ಸಮಯದವರೆಗೆ ಮನೆಗೆ ಬಾರದೆ ಇದ್ದಾಗ, ಆಕೆಯ ಕುಟುಂಬಸ್ಥರು ಆಕೆಗಾಗಿ ಹುಡುಕಾಟ ನಡೆಸಿದಾಗ ಆಕೆ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮಾತ್ರ ಆಕೆಯ ಸ್ಥಿತಿ ಗಂಭೀರವಾಗಿದೆ. ತಕ್ಷಣವೇ ಸಂತ್ರಸ್ತೆಯನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಹಿಳೆಗೆ ಗರ್ಭಪಾತವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ನ್ಯಾಯಕ್ಕಾಗಿ ಒತ್ತಾಯಿಸಿ, ಸಂತ್ರಸ್ತೆಯ ಕುಟುಂಬ ಸದಸ್ಯರು ಪ್ಲಾಸ್ಟಿಕ್ ಜಾರ್‌ನಲ್ಲಿ ಭ್ರೂಣದೊಂದಿಗೆ ಎಸ್‌ಎಸ್‌ಪಿ ಕಚೇರಿ ತಲುಪಿದರು. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕುಟುಂಬದವರು ಆಗ್ರಹಿಸಿದ್ದಾರೆ.
ವಿಷಯ ತಿಳಿದು ಎಸ್‌ಪಿ ದೇಹತ್ ರಾಜ್‌ಕುಮಾರ್ ಅಗರ್ವಾಲ್ ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ. ಮಹಿಳೆಯ ಹೇಳಿಕೆಯನ್ನು ತೆಗೆದುಕೊಳ್ಳಲಾಗುತ್ತಿದ್ದು, ಸತ್ಯಾಂಶ ಹೊರ ಬಂದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.