ನೆನಪಿರಲಿ ಪ್ರೇಮ್ ಅವರ ತಾಯಿಗೆ ಕೊರೋನಾ ಸೋಂಕು
ಬೆಂಗಳೂರು, ಜುಲೈ 14: ಸ್ಯಾಂಡಲ್ವುಡ್ ನಟ ನೆನಪಿರಲಿ ಪ್ರೇಮ್ ಅವರ ತಾಯಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ನಟ ಪ್ರೇಮ್ ಅವರ ತಾಯಿಗೆ 66 ವರ್ಷ ವಯಸ್ಸಾಗಿದ್ದು, ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಮಾಕ್ಷಿ ಪಾಳ್ಯದಲ್ಲಿ ನೆಲೆಸಿರುವ ಪ್ರೇಮ್ ತಾಯಿ ಕೆಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಹಾಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೊರೋನಾ ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ನಟ ಪ್ರೇಮ್ ಸೇರಿದಂತೆ ಕುಟುಂಬ ಸದಸ್ಯರೆಲ್ಲರೂ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದು, ಉಳಿದೆಲ್ಲರ ರಿಪೋರ್ಟ್ ನೆಗೆಟಿವ್ ಆಗಿದೆ.