ಉಡುಪಿ ಜಿಲ್ಲೆಯಲ್ಲಿ ವಿಧಾನ ಪರಿಷತ್ ಚುನಾವಣೆಗೆ ಸಕಲ ಸಿದ್ಧತೆ Vidhan Parishad saaksha tv
ಉಡುಪಿ : ಜಿಲ್ಲೆಯಲ್ಲಿ ವಿಧಾನ ಪರಿಷತ್ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇಂದು ತಾಲೂಕಿನ ಮಟ್ಟದಲ್ಲಿ ಮಸ್ಟರಿಂಗ್ ಕಾರ್ಯ ನಡೆದಿದೆ.
ಮತದಾನ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಕೂರ್ಮರಾವ್, ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಸೇರಿದಂತೆ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲೆಯಾದ್ಯಂತ 158 ಕೇಂದ್ರಗಳಲ್ಲಿ ಮತದಾನ ನಡೆಯಲಿದ್ದು, ಮತಗಟ್ಟೆಗಳ ಸುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಮತದಾನ ವೇಳೆ ಕಟ್ಟುನಿಟ್ಟಿನ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.