ನವದೆಹಲಿ: ಗಣರಾಜ್ಯೋತ್ಸವ ದಿನದಂದು ಕೆಂಪುಕೋಟೆಯ ಮೇಲಿನ ರಾಷ್ಟ್ರಧ್ವಜಕ್ಕೆ ಕಿಡಿಗೇಡಿಗಳು ಅವಮಾನ ಮಾಡಿದ್ದು ವಿಷಾಧನೀಯ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಬೇಸರ ವ್ಯಕ್ತಪಡಿಸಿದ್ದಾರೆ.
ಸಂಸತ್ನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು, ರೈತರ ಟ್ರ್ಯಾಕ್ಟರ್ ಜಾಥಾ ವೇಳೆ ನಡೆದ ಹಿಂಸಾಚಾರ ದುರದೃಷ್ಟಕರ. ಕಿಡಿಗೇಡಿಗಳು ಕೆಂಪುಕೋಟೆ ಮೇಲೆ ಹತ್ತಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ. ನಮ್ಮ ಸಂವಿಧಾನ ನಮಗೆ ಅಭಿಪ್ರಾಯ ಸ್ವಾತಂತ್ರ್ಯ ನೀಡಿದೆ, ಅದರ ಜತೆಗೆ ಕಾನೂನೂ ಕಟ್ಟಳೆಗಳನ್ನೂ ನೀಡಿದೆ. ಆದರೆ, ನಮ್ಮ ಜನರು ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವುದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜನವರಿ 26ರಂದು ನಡೆದ ಹಿಂಸಾಚಾರ ದುರದೃಷ್ಟಕರ, ಈ ಮೊದಲೇ ರೈತರು ಟ್ರ್ಯಾಕ್ಟರ್ ಮೆರವಣಿಗೆ ಮಾಡಿದ್ದಾರೆ. ಆದರೆ, ರೈತರ ಪ್ರತಿಭಟನೆ ನೆಪದಲ್ಲಿ ಬಂದು ಕೆಂಪುಕೋಟೆಯ ಮೇಲೆ ರಾಷ್ಟ್ರಧ್ವಜಕ್ಕೆ ಅಗೌರವ ತೋರಿಸಿದ್ದು ಸಮರ್ಥನೀಯವಲ್ಲ ಎಂದು ಹೇಳಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel