ರಾಷ್ಟ್ರಪತಿ ಚುನಾವಣೆ – ದ್ರೌಪದಿ ಮುರ್ಮು ಗೆಲುವು ಬಹುತೇಕ ಖಚಿತ…
ಭಾರತದ 15ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಮುಂಜಾನೆಯಿಂದ ಚುನಾವಣೆ ನಡೆಯುತ್ತಿದೆ. ದೇಶದ ಸುಮಾರು 4,800 ಚುನಾಯಿತ ಸಂಸದರು ಮತ್ತು ಶಾಸಕರು ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರೆ.
ಸಂಸತ್ ಭವನ ಹಾಗೂ ಅಯಾ ರಾಜ್ಯಗಳ ವಿಧಾನಸಭೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಚುನಾವಣೆ ನಡೆಯಲಿದ್ದು, ಜುಲೈ 21 ರಂದು ಸಂಸತ್ ಭವನದಲ್ಲಿ ಮತ ಎಣಿಕೆ ನಡೆದು, ಜುಲೈ 25 ರಂದು ಮುಂದಿನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಗೆಲುವು ಬಹುತೇಕ ನಿಚ್ಚಳವಾಗಿದೆ. ಪ್ರತಿಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರಿಗಿಂತ ಹೆಚ್ಚು ಬೆಂಬಲ ಹೊಂದಿದ್ದಾರೆ. ದ್ರೌಪದಿ ವರ್ಮ ಅವರು ಆಯ್ಕೆಯಾದರೆ ಬುಡಕಟ್ಟು ಸಮುದಾಯದಿಂದ ಉನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆಯಾಗಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ಸಂಸದರು ಸಂಸತ್ತ ಭವನದಲ್ಲಿ ಪ್ರಮಾಣವಚನವನ್ನ ಸ್ವೀಕರಿಸುತ್ತಿದ್ದಾರೆ. President poll – Voting in the election being held for the post of President of India