ಬೆಂಗಳೂರಿಗೆ ರಾಷ್ಟ್ರಪತಿ ಕೋವಿಂದ್ ಆಗಮನ –CM, ರಾಜ್ಯಪಾಲರಿಂದ ಸ್ವಾಗತ

1 min read

ಬೆಂಗಳೂರಿಗೆ ರಾಷ್ಟ್ರಪತಿ ಕೋವಿಂದ್ ಆಗಮನ –CM, ರಾಜ್ಯಪಾಲರಿಂದ ಸ್ವಾಗತ

ಬೆಂಗಳೂರು – ಎರಡು ದಿನಗಳ ರಾಜ್ಯ ಪ್ರವಾಸದ ನಿಮಿತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಸವಿತಾ ಕೋವಿಂದ್ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.

ನಗರದ ವಾಯುಪಡೆಯ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದ ರಾಷ್ಟ್ರಪತಿ ಕೋವಿಂದ್ ದಂಪತಿಗಳನ್ನ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಬರಮಾಡಿಕೊಂಡರು.

ಇಂದು ರಾಷ್ಟ್ರೀಯ ಮಿಲಿಟರಿ ಶಾಲೆಯ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಭಾಗಿಯಾಗಲಿದ್ದಾರೆ. ನಾಳೆ ಮಂಗಳವಾರ ಕನಕಪುರ ರಸ್ತೆಯ ಸಮೀಪದಲ್ಲಿರುವ ವಸಂತಪುರದ ವೈಕುಂಠ ಬೆಟ್ಟದಲ್ಲಿ ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘ (ಇಸ್ಕಾನ್‌) ನೂತನವಾಗಿ ನಿರ್ಮಿಸಿರುವ ರಾಜಾಧಿರಾಜ ‍ಶ್ರೀ ಗೋವಿಂದ ದೇವಾಲಯದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಭಾಗವಹಿಲಿದ್ದಾರೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd