ADVERTISEMENT
Wednesday, June 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ನೀಡಿದ ರಾಷ್ಟ್ರಪತಿ

admin by admin
August 15, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸ್ವಾತಂತ್ರ್ಯ ದಿನಾಚರಣೆ ಮುನ್ನಾ ದಿನ ದೇಶವನ್ನುದ್ದೇಶಿಸಿ ಮಾತನಾಡಿದರು. ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹರಡಿರುವ ಸಮಯದಲ್ಲಿ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವಂತೆ ಜನರಿಗೆ ಮನವಿ ಮಾಡಿದರು.

ಹೊಸದಿಲ್ಲಿ, ಅಗಸ್ಟ್ 15: ದೇಶ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದು ನಿಮ್ಮ ಆರೋಗ್ಯ ವನ್ನು ಗಮನದಲ್ಲಿಟ್ಟುಕೊಂಡು ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾರತೀಯರಲ್ಲಿ ಮನವಿ ಮಾಡಿದ್ದಾರೆ. ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಆಚರಿಸಬೇಕಿದೆ ಎಂದು ಮನವಿ ಮಾಡಿದರು.

Related posts

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

June 17, 2026
ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

June 17, 2026

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದೇಶವನ್ನುದ್ದೇಶಿಸಿ ಮಾತನಾಡಿದ ರಾಮನಾಥ್ ಕೋವಿಂದ್, ಕೊರೋನಾ ವೈರಸ್ ವಿರುದ್ಧ ಹೋರಾಟ, ನವ ಭಾರತ ನಿರ್ಮಾಣ, ಹೊಸ ಶಿಕ್ಷಣ ನೀತಿ, ಸಾಂಸ್ಕೃತಿಕ, ಪಾರಂಪರಿಕ ಹಾಗೂ ಐತಿಹಾಸಿಕ ಪರಂಪರೆಗಳ ಪುನರ್ ಸ್ಥಾಪನೆ ಸೇರಿದಂತೆ ಹತ್ತು ಹಲವು ವಿಚಾರಗಳ ಕುರಿತು ಪ್ರಸ್ತಾಪಿಸಿದರು.

NPR Kovind

ಪ್ರತಿ ವರ್ಷ ಆಗಸ್ಟ್ 15 ರಂದು ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದ ಹೋರಾಟಗಾರರನ್ನು ನೆನಪಿಸಿಕೊಂಡು ಧ್ವಜಾರೋಹಣ ಮೂಲಕ ಸ್ವಾತಂತ್ರ್ಯ ದಿನಾಚರಣೆ ಆರಂಭಿಸುತ್ತೇವೆ. ಸ್ವಾತಂತ್ರ್ಯ ಸಂಗ್ರಾಮ ಆದರ್ಶದಲ್ಲೇ ಆಧುನಿಕ ಭಾರತ ನಿರ್ಮಾಣವಾಗುತ್ತಿದೆ. ಹೊಸ ಪರಿಕಲ್ಪನೆ, ಹೊಸ ಯೋಜನೆ ಮೂಲಕ ಅತ್ಮ ನಿರ್ಭರ್ ಭಾರತಕ್ಕೆ ಅಡಿಪಾಯ ಹಾಕಲಾಗಿದೆ ಎಂದು ಕೋವಿಂದ್ ಹೇಳಿದರು.

ಕಳೆದ ಕೆಲ ತಿಂಗಳುಗಳಿಂದ ಭಾರತದಲ್ಲಿ ಕೊರೋನಾ ಹೋರಾಟದಲ್ಲಿ ಸಕ್ರಿಯವಾಗಿರುವ ವೈದ್ಯರು, ನರ್ಸ್, ಆಸ್ಪತ್ರೆ ಸಿಬ್ಬಂದಿಗಳು, ಪೊಲೀಸರು, ಸ್ವಯಂ ಸೇವಕರು, ಸರ್ಕಾರಿ ಅಧಿಕಾರಿಗಳು ಸೇರಿದಂತೆ ಈ ಹೋರಾಟದಲ್ಲಿ ಭಾಗಿಯಾಗಿರುವ ಎಲ್ಲರಿಗೂ ಅಭಿನಂದನೆ ತಿಳಿಸಿದರು.

ಕೊರೋನಾ ದಿಂದ ದಿನಗೂಲಿ ನೌಕರರು ಆದಾಯವಿಲ್ಲದೆ ಪರಿತಪಿಸುತಿದ್ದು ಸರಕಾರ ಉಚಿತ ರೇಶನ್ ನೀಡುವ ಯೋಜನೆಯನ್ನು ನವೆಂಬರ್ 2020ರ ವರೆಗೆ ವಿಸ್ತರಿಸಿದೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿದೆ.

ಕೊರೋನಾ ವೈರಸ್‌ನ ಬಿಕ್ಕಟ್ಟಿನ ನಡುವೆ ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.ಈ ಕಠಿಣ ಪರಿಸ್ಥಿತಿಯಲ್ಲಿ ಸರ್ಕಾರ, ಸಂಘ ಸಂಸ್ಥೆಗಳು, ಭದ್ರತಾ ಪಡೆಗಳು ಸೇರಿದಂತೆ ಹಲವರು ನೆರವಿಗೆ ಧಾವಿಸಿದ್ದಾರೆ. ರಕ್ಷಣಾ ಪಡೆಗಳು ಕುಟುಂಬಗಳನ್ನು ಆಪತ್ತಿನಿಂದ ಪಾರುಮಾಡುತ್ತಿದೆ. ಸಂಕಷ್ಟದ ಪರಿಸ್ಥಿತಿಯಲ್ಲಿ ಎಲ್ಲರೂ ಜೊತೆಯಾಗಿ, ಒಗ್ಗಟ್ಟಾಗಿ ನಿಲ್ಲಬೇಕು ಎಂದಿದ್ದಾರೆ.

ಗಡಿ ಪ್ರದೇಶದಲ್ಲಿ ಭಾರತದ 20 ವೀರ ಯೋಧರು ಹುತಾತ್ಮರಾಗಿದ್ದಾರೆ. ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸುತ್ತೇನೆ. . ಈ ದೇಶ ಗಡಿಯಲ್ಲಿ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡುತ್ತಿರುವ ಎಲ್ಲಾ ವೀರ ಯೋಧರಿಗೆ ಸಲಾಂ ಎಂದು ಕೋವಿಂದ್ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಕುಸಿದ ಆರ್ಥಿಕತೆ ಮೇಲಕ್ಕೆತ್ತಲು ಕೇಂದ್ರ ಸರ್ಕಾರ ಹಲವು ಯೋಜನೆ ಜಾರಿಗೊಳಿಸಿದೆ. ರೈತರು, ಚೇತರಿಸಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಪ್ರಕೃತಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಬದುಕಬೇಕಿದೆ. ಶುಚಿತ್ವಕ್ಕೆ ಆದ್ಯತೆ ನೀಡಬೇಕು ಎಂದು ಕರೆನೀಡಿದರು.

ವಿಜ್ಞಾನ ಹಾಗೂ ತಂತ್ರಜ್ಞಾನವನ್ನು ಬಳಸಿಕೊಂಡು ಹೊಸ ಭಾರತದ ಅಡಿಪಾಯ ನಿರ್ಮಾಣವಾಗುತ್ತಿದ್ದು ಯುವ ಜನಾಂಗಕ್ಕೆ ಭಾರತದ ಭವಿಷ್ಯ ಸುರಕ್ಷಿತ ಅನ್ನೋ ವಿಶ್ವಾಸ ನನಗಿದೆ ಎಂದು ಕೋವಿಂದ್ ಭರವಸೆ ವ್ಯಕ್ತಪಡಿಸಿದ್ದಾರೆ.

ಕೊರೋನಾ ವೈರಸ್ನಿಂದ ಮಕ್ಕಳ ಶಿಕ್ಷಣದ ಕುರಿತು ಚಿಂತಿಸುವ ಅಗತ್ಯವಿಲ್ಲ ಈ ರೀತಿಯ ಪರಿಸ್ಥಿತಿಗಳು ಶಾಶ್ವತವಲ್ಲ. ಮಕ್ಕಳ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ನೂತನ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ. ಯಾವುದೇ ರಾಷ್ಟ್ರವನ್ನು ಬಲಿಷ್ಠ ಮಾಡಲು ಯುವಕರನ್ನು ಸುಶಿಕ್ಷಿತರನ್ನಾಗಿ ಮಾಡಬೇಕು. ಈ ನಿಟ್ಟಿನಲ್ಲಿ ಭಾರತ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದರು.

ಇತ್ತೀಚೆಗೆ ಅಯೋಧ್ಯೆಯಲ್ಲಿ ನಡೆದ ರಾಮ ಮಂದಿರ ಶಿಲಾನ್ಯಾಸ ಪ್ರಸ್ತಾಪಿಸಿ, ಈ ಕ್ಷಣಕ್ಕೆ ನಾವೆಲ್ಲ ಸಾಕ್ಷಿಯಾಗಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು

Tags: #74th Independence Dayindependence dayIndependence Day messageindiapresidentRam Nath Kovind
ShareTweetSendShare
Join us on:

Related Posts

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

by admin
June 17, 2026
0

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..! ಸರಿ ಸುಮಾರು 20 ವರ್ಷಗಳ ಹಿಂದೆ ಆತ ಕುರಿಗಾಯಿ ಬಾಲಕ. ಅಲೆಮಾರಿ ಕುಟುಂಬದ ಈ ಹುಡುಗನಿಗೆ...

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

by Shwetha
June 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ವಿಚಾರವಾಗಿ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಸಂಘಟನೆಯನ್ನು ಹಿಂದೂ ಧರ್ಮಕ್ಕೆ ಹೋಲಿಸಿ...

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

by Shwetha
June 17, 2026
0

ರೌಡಿಪಟ್ಟಿಯಿಂದ 66 ರೌಡಿಶೀಟರ್‌ಗಳ ಹೆಸರನ್ನು ಕೈಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಪೊಲೀಸ್...

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

by Shwetha
June 17, 2026
0

ಚೆನ್ನೈ: ಮುಂಬರುವ ನೀಟ್ ಯುಜಿ ಮರುಪರೀಕ್ಷೆಗೆ ಕೇಂದ್ರ ಶಿಕ್ಷಣ ಸಚಿವಾಲಯ ಹಾಗೂ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಕೈಗೊಂಡಿರುವ ಅತಿಯಾದ ಭದ್ರತಾ ಕ್ರಮಗಳ ವಿರುದ್ಧ ತಮಿಳುನಾಡಿನ ಪ್ರಭಾವಿ ನಾಯಕ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

RSS ಬಗ್ಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ; ಪಾರದರ್ಶಕತೆ ಕುರಿತು ಮಹತ್ವದ ಹೇಳಿಕೆ

by Shwetha
June 17, 2026
0

ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂ ಸೇವಕ್ ಸಂಘ ಕುರಿತು ಮಹತ್ವದ ಹೇಳಿಕೆ ನೀಡಿದ್ದು, ಯಾವುದೇ ಸಂಘ-ಸಂಸ್ಥೆ ದೇಶದ ಕಾನೂನು ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram