ಬಿಜೆಪಿ ಹಾಗೂ ಜೆಡಿಎಸ್ ಶಾಸಕರನ್ನು ಪಕ್ಷಕ್ಕೆ ಸೆಳೆಯುವ ಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಮುಳುಬಾಗಿಲು (Mulbagal) ಕ್ಷೇತ್ರದ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ (Samrudhi Manjunath) ಕಾಂಗ್ರೆಸ್ ಗೆ ಸೆಳೆಯಲಾಗುತ್ತಿದೆ ಎಂಬ ವದಂತಿಗಳು ಕೂಡ ಹಬ್ಬಿವೆ.
ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಕ್ಷೇತ್ರಗಳನ್ನು ಗೆಲ್ಲಲೇಬೇಕು ಎಂದು ಕಾಂಗ್ರೆಸ್ ಪಣತೊಟ್ಟಿದೆ. ಹೀಗಾಗಿಯೇ ಕಾಂಗ್ರೆಸ್ ಎಲ್ಲ ತಂತ್ರಗಳನ್ನು ಹೆಣೆಯುತ್ತಿದೆ. ಇದರ ಭಾಗವಾಗಿ ಜೆಡಿಎಸ್ ಹಾಗೂ ಬಿಜೆಪಿ ಶಾಸಕರನ್ನೇ ಟಾರ್ಗೆಟ್ ಮಾಡುತ್ತಿದೆ ಎನ್ನಲಾಗಿದೆ. ಈ ವಿಷಯವಾಗಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ.