ಲತಾ ಮಂಗೇಶ್ಕರ್ ಅವರಿಗೆ ಅಂತಿಮ ನಮನ ಸಲ್ಲಿಸಲು ಪ್ರಧಾನಿ ಆಗಮನ Saaksha Tv
ಮುಂಬೈ: ಬಹು ಅಂಗಾಂಗ ವೈಫಲ್ಯದಿಂದ ಇಂದು ಮುಂಜಾನೆ ನಿಧನರಾದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ Lata Mangeshkar ಅವರಿಗೆ ಅಂತಿಮ ನಮನ ಸಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ.
ಲತಾ ದೀದಿ ಅವರಿಗೆ ಅಂತಿಮ ನಮನ ಸಲ್ಲಿಸಲು ಮುಂಬೈಗೆ ತೆರಳುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಮಧ್ಯಾಹ್ನ ಮುಬೈನ ಪೆದ್ದಾರ್ ರಸ್ತೆಯಲ್ಲಿರುವ ಅವರ ನಿವಾಸ ‘ಪ್ರಭುಕುಂಜ್’ಗೆ ಅವರ ಪಾರ್ಥೀವ ಶರೀರವನ್ನು ತರಲಾಗಿದ್ದು, ಸಂಜೆ 6:30 ಸಕಲ ಸರಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ
ಗೀತರಚನೆಕಾರ ಜಾವೇದ್ ಅಖ್ತರ್, ನಟ ಅನುಪಮ್ ಖೇರ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರು ಲತಾ ಮಂಗೇಶ್ಕರ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದ್ದಾರೆ