ನವದೆಹಲಿ: ಛತ್ರಪತಿ ಶಿವಾಜಿ ಪ್ರತಿಮೆ ಧರೆಗೆ ಕುಸಿದಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಕ್ಷಮೆಯಾಚಿಸಿದ್ದಾರೆ.
ಪ್ರತಿಮೆ ಕುಸಿತದ ಬಗ್ಗೆ ನಾನು ಮೊದಲು ಛತ್ರಪತಿ ಶಿವಾಜಿ (Shivaji Statue Collapse) ಬಳಿ ಕ್ಷಮೆಯಾಚಿಸಿದೆ. ಪ್ರತಿಮೆ ಕುಸಿತದಿಂದ ನೊಂದಿರುವ ಜನರಲ್ಲಿ ನಾನು ಕ್ಷಮೆಯಾಚಿಸುತ್ತೇನೆ ಎಂದು ಮಹಾರಾಷ್ಟ್ರದ ಪಾಲ್ಘರ್ನಲ್ಲಿ ಪ್ರಧಾನಿ ಮೋದಿ ತಿಳಿಸಿದ್ದಾರೆ.
ಶಿವಾಜಿ ಮಹಾರಾಜರನ್ನು ತಮ್ಮ ಆರಾಧ್ಯ ದೈವವೆಂದು ಪರಿಗಣಿಸುವವರು ಮತ್ತು ಘಟನೆಯಿಂದ ತೀವ್ರವಾಗಿ ನೊಂದಿರುವವರ ಬಳಿ ನಾನು ತಲೆಬಾಗಿ ಕ್ಷಮೆಯಾಚಿಸುತ್ತೇನೆ. ನಮ್ಮ ಮೌಲ್ಯಗಳು ವಿಭಿನ್ನವಾಗಿವೆ. ಇದಕ್ಕಿಂತ ದೊಡ್ಡದು ಏನು ಇಲ್ಲ ಎಂದು ಮೋದಿ ಬೇಸರ ವ್ಯಕ್ತಪಡಿಸಿದ್ದಾರೆ.
ನೌಕಾಸೇನೆ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟವು, ಪ್ರತಿಮೆ ನಿರ್ಮಾಣದ ವಿಷಯದಲ್ಲಿ ಆಡಳಿತಾರೂಢ ಸರ್ಕಾರ ಭ್ರಷ್ಟಾಚಾರ ಮಾಡಿದೆ ಎಂದು ಆರೋಪಿಸಿದೆ.