ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜ್ಯಕ್ಕೆ ಆಗಮಿಸಿದ್ದಾರೆ. ಅವರು ಇಂದು ಬೆಳಿಗ್ಗೆ ಎಚ್ ಎಎಲ್ ವಿಮಾನ ನಿಲ್ದಾಣಕ್ಕೆ ಅವರು ಬಂದಿಳಿದಿದ್ದಾರೆ.
ಹೆಚ್‌ಎಎಲ್ ಸಂಸ್ಥೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್ ಎಎಲ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. 500ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ.
ಪ್ರಧಾನಿ ಮೋದಿ ಅವರು ಮಧ್ಯಾಹ್ನ 12ರ ವರೆಗೂ ಇದ್ದು ನಂತರ ತೆಲಂಗಾಣಕ್ಕೆ ಚುನಾವಣಾ ಪ್ರಚಾರಕ್ಕಾಗಿ ತೆರಳಲಿದ್ದಾರೆ.