ಸ್ಯಾಂಡಲ್ ವುಡ್ ನ ಹಿರಿಯ ನಟ ದ್ವಾರಕೀಶ ನಿಧನರಾಗಿದ್ದಕ್ಕೆ ಗಣ್ಯರು ಕಂಬನಿ ಮಿಡಿಯುತ್ತಿದ್ದಾರೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
ತಮ್ಮ ಎಕ್ಸ್ ಖಾತೆಯ ಮೂಲಕ ದ್ವಾರಕೀಶ್ ಅವರಿಗೆ ಪ್ರಧಾನಿ ಮೋದಿ ನಮನ ಸಲ್ಲಿಸಿದ್ದಾರೆ. ದಶಕಗಳ ಕಾಲ ಮರೆಯಲಾಗದ ಅಭಿನಯ ಮತ್ತು ಭಿನ್ನವಾದ ಸಿನಿಮಾಗಳ ಮೂಲಕ ಚಿತ್ರರಂಗಕ್ಕೆ ದ್ವಾರಕೀಶ್ ಅವರು ನೀಡಿದ ಕೊಡುಗೆ ಅಪಾರ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿ, ಪ್ರೇಕ್ಷಕರನ್ನು ಸೆಳೆದುಕೊಳ್ಳುವ ಮೂಲಕ ಕನ್ನಡ ಚಿತ್ರರಂಗವನ್ನು ಅವರು ಬೆಳೆಸಿದರು.
ಅವರ ನಿಧನದಿಂದ ದುಃಖ ಆಗಿದೆ. ಅದ್ಭುತವಾದ ಅವರ ಸಿನಿಮಾ ಪಯಣವನ್ನು ನಾವು ಸದಾ ಸ್ಮರಿಸುತ್ತೇವೆ. ಅವರ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಸಂತಾಪಗಳು ಎಂದು ಪ್ರಧಾನಿ ಬರೆದುಕೊಂಡು ಸಂತಾಪ ಸೂಚಿಸಿದ್ದಾರೆ.
ಇನ್ನುಳಿದಂತೆ ಹಲವಾರು ಗಣ್ಯರು ಕೂಡ ಸಂತಾಪ ಸೂಚಿಸಿದ್ದಾರೆ.