ನವದೆಹಲಿ: ಕೇವಲ 50 ಗ್ರಾಂ ಹೆಚ್ಚು ತೂಕ ಹೊಂದಿದ್ದಕ್ಕೆ ವಿನೇಶ್ ಪೋಗಟ್ ಪ್ಯಾರಿಸ್ ಒಲಿಂಪಿಕ್ಸ್ ನಿಂದ ಹೊರ ಬಿದ್ದಿದ್ದಾರೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಧೈರ್ಯ ತುಂಬುವ ಕಾರ್ಯ ಮಾಡಿದ್ದಾರೆ.
ನೀವು ಚಾಂಪಿಯನ್ಗಳಲ್ಲಿ ಚಾಂಪಿಯನ್ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಗೆ ಸಮಾಧನ ಹೇಳಿದ್ದಾರೆ. ಮಹಿಳೆಯರ 50 ಕೆಜಿ ಕುಸ್ತಿ ಫ್ರೀಸ್ಟೈಲ್ ವಿಭಾಗದ ಫೈನಲ್ ಸ್ಪರ್ಧೆಯಿಂದ ವಿನೇಶ್ ಫೋಗಟ್ ಅನರ್ಹತೆಗೊಂಡ ನಂತರ ಪ್ರಧಾನಿ ನರೇಂದ್ರ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಸಮಾಧಾನ ಹೇಳಿ ಬೆಂಬಲ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಮೋದಿ ಅವರು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಅಧ್ಯಕ್ಷೆ ಪಿಟಿ ಉಷಾ ಅವರೊಂದಿಗೆ ಮಾತನಾಡಿ, ನಡೆದ ವಿಷಯದ ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ. ಹೀಗಾಗಿ ವಿನೇಶ್, ನೀವು ಚಾಂಪಿಯನ್ಗಳಲ್ಲಿ ಚಾಂಪಿಯನ್! ನೀವು ಭಾರತದ ಹೆಮ್ಮೆ ಮತ್ತು ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿ. ಇಂದಿನ ಹಿನ್ನಡೆ ನೋವು ತಂದಿದೆ. ಪದಗಳು ನಾನು ಅನುಭವಿಸುತ್ತಿರುವ ಹತಾಶೆಯ ಅರ್ಥವನ್ನು ವ್ಯಕ್ತಪಡಿಸಬಹುದು ಎಂದು ನಾನು ಬಯಸುತ್ತೇನೆ ಎಂದು ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ.
ಸವಾಲುಗಳನ್ನು ಎದುರಿಸುವುದು ಯಾವಾಗಲೂ ನಿಮ್ಮ ಸ್ವಭಾವವಾಗಿದೆ. ಮತ್ತೆ ಶಕ್ತಿಶಾಲಿಯಾಗಿ ಮರಳಿ ಬನ್ನಿ. ನಾವು ನಿಮ್ಮ ಜೊತೆ ಇದ್ದೇವೆ ಎಂದು ಹಾರೈಸಿದ್ದಾರೆ. ಪ್ರಧಾನಿ ಮೋದಿ ಅವರ ಈ ಮಾತಿಗೆ ಇಡೀ ಭಾರತ ಕೂಡ ಧ್ವನಿ ಗೂಡಿಸಿ ನಾವಿದ್ದೇವೆ ಎಂದು ಹೇಳುತ್ತಿದೆ.