ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, 2025 ಎಲ್ಲರಿಗೂ ಹೊಸ ಅವಕಾಶ, ಯಶಸ್ಸನ್ನು ತರಲಿ. 2025ಕ್ಕೆ ಎಲ್ಲರಿಗೂ ಶುಭಾಶಯಗಳು, ಈ ವರ್ಷ ಎಲ್ಲರಿಗೂ ಹೊಸ ಅವಕಾಶಗಳು, ಯಶಸ್ಸು ಮತ್ತು ಸಂತೋಷವನ್ನು ತರಲಿ. ಹೊಸ ವರ್ಷ ಎಲ್ಲರಿಗೂ ಆರೋಗ್ಯ ಮತ್ತು ಸಮೃದ್ಧಿಯೊಂದಿಗೆ ಆಶೀರ್ವದಿಸಲಿ ಎಂದು ಬರೆದುಕೊಂಡಿದ್ದಾರೆ.
ಅಲ್ಲದೇ, ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಕೂಡ ಶುಭಾಶಯ ಕೋರಿದ್ದಾರೆ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. 2025ರ ವರ್ಷವು ಎಲ್ಲರಿಗೂ ಸಂತೋಷ, ಸಾಮರಸ್ಯ ಮತ್ತು ಸಮೃದ್ಧಿಯನ್ನು ತರಲಿ. ಈ ಸಂದರ್ಭದಲ್ಲಿ, ಭಾರತ ಮತ್ತು ಜಗತ್ತಿಗೆ ಉಜ್ವಲ ಮತ್ತು ಸುಸ್ಥಿರ ಭವಿಷ್ಯವನ್ನು ರಚಿಸಲು ಒಟ್ಟಾಗಿ ಕೆಲಸ ಮಾಡುವ ನಮ್ಮ ಬದ್ಧತೆಯನ್ನು ನವೀಕರಿಸೋಣ ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ವಿಧಾನಸಭೆಯಲ್ಲಿ ನಾನೇ ಸಿಎಂ ಎಂದು ಗುಡುಗಿದ ಸಿದ್ದರಾಮಯ್ಯ; ಮುಗುಳ್ನಗುತ್ತಲೇ ನಿಗೂಢ ಸಂದೇಶ ರವಾನಿಸಿದ ಡಿಕೆ ಶಿವಕುಮಾರ್
ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಎಂಬ ಗುಸುಗುಸು ಮತ್ತು ವಿಪಕ್ಷಗಳ ಟೀಕಾಸ್ತ್ರಗಳ ನಡುವೆಯೇ ವಿಧಾನಸಭೆಯ ಕಲಾಪ ಹೈವೋಲ್ಟೇಜ್ ನಾಟಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ...








