ಪ್ರಧಾನಿ ನರೇಂದ್ರ ಮೋದಿ ಅವರು, ಅಯೋಧ್ಯೆಯ (Ayodhya) ಅಯೋಧ್ಯಾ ಧಾಮ್ ರೈಲು (Ayodhya Dhaam Junction) ನಿಲ್ದಾಣ ಲೋಕಾರ್ಪಣೆಗೊಳಿಸಿದ್ದಾರೆ.
ಅಲ್ಲದೇ, ಅವರು ನೂತನ ರೈಲುಗಳಿಗೆ ಚಾಲನೆ ನೀಡಿದ್ದಾರೆ. ಅಯೋಧ್ಯೆ ಅಷ್ಟೇ ಅಲ್ಲದೇ, ದೇಶದ ಇನ್ನಿತರ ಪ್ರದೇಶಗಳಿಗೆ ಸಂಚರಿಸಲಿರುವ ಮಾತ್ರವಲ್ಲದೆ, ವಂದೇ ಭಾರತ್ ರೈಲುಗಳಿಗೂ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ. ಮಂಗಳೂರಿನಿಂದ ಗೋವಾಕ್ಕೆ ತೆರಳುವ, ಬೆಂಗಳೂರಿನಿಂದ ಕೊಯಮತ್ತೂರಿಗೆ ತೆರಳುವ ವಂದೇ ಭಾರತ್ ರೈಲುಗಳು ಮತ್ತು ಮಾಲ್ಡಾ ಬೆಂಗಳೂರು ಅಮೃತ್ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಚಾಲನೆ ನೀಡಲಾಯಿತು.
ಮಾತಾ ವೈಷ್ಣೋ ದೇವಿ ಕತ್ರಾ – ನವದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಸೇರಿದಂತೆ ಆರು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದರು. ರೈಲು ಮೂಲಸೌಕರ್ಯವನ್ನು ಬಲಪಡಿಸಲು 2300 ಕೋಟಿ ರೂ. ಮೌಲ್ಯದ ಮೂರು ರೈಲ್ವೆ ಯೋಜನೆಗಳನ್ನು ಕೂಡ ಪ್ರಧಾನಿ ಲೋಕಾರ್ಪಣೆಗೊಳಿಸಿದರು. ಉದ್ಘಾಟನಾ ಸಮಾರಂಭಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ ಶೋ ನಡೆಸಿದರು.