ಕಾಮನ್ ವೆಲ್ತ್ ಪದಕ ವಿಜೇತರಿಗೆ ಆತಿಥ್ಯ ನೀಡಿದ ಪ್ರಧಾನಿ ನರೇಂದ್ರ ಮೋದಿ…
ಬರ್ಮಿಂಗ್‌ಹ್ಯಾಮ್ ನಲ್ಲಿ ನಡೆದ ಕಾಮನ್ ವೆಲ್ತ್ ಕ್ರೀಡಾಕೂಟದ ಪದಕ ವಿಜೇತರಿಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ನಿವಾಸದಲ್ಲಿ ಆತಿಥ್ಯ ನೀಡಿದರು. ಆಟಗಾರರ ಅನುಭವವನ್ನ ಕೇಳಿದ ಪ್ರಧಾನಿ ಮೋದಿ ಏಷ್ಯನ್ ಗೇಮ್ಸ್ ಮತ್ತು ಒಲಿಂಪಿಕ್ಸ್‌ಗೆ ಈಗಲೇ ತಯಾರಿ ಆರಂಭಿಸುವಂತೆ ಸಲಹೆ ನೀಡಿದರು.
ನಂತರ ಕ್ರೀಡಾಪಟುಗಳ ಜೊತೆ ಮಾತನಾಡಿದ ಪ್ರಧಾನಿ “ಹಾಕಿಯಲ್ಲಿ ನಾವು ನಮ್ಮ ಹಳೆಯ ಸ್ಥಾನಮಾನಗಳನ್ನ ಸಾಧಿಸುತ್ತಿರುವ ರೀತಿ ಶ್ಲಾಘನೀಯ. ಪುರುಷ ಮತ್ತು ಮಹಿಳಾ ಹಾಕಿ ತಂಡಗಳಿಗೆ ಅಭಿನಂದನೆಗಳು. ಹಲವು ಕ್ರೀಡೆಗಳಲ್ಲಿ ಪದಕ ಗೆಲ್ಲುವ ಸನಿಹದಲ್ಲಿದ್ದೆವು ಎಂಬುದೇ ನಮಗೆ ಸಂತಸ ತಂದಿದೆ. ಹುಡುಗಿಯರು ಚೆನ್ನಾಗಿ ಆಡಿದರು. ಬೆಳ್ಳಿ ಪದಕ ಗೆದ್ದ ನಂತರ ಪೂಜಾ ದೇಶದ ಕ್ಷಮೆ ಯಾಚಿಸಿ ಭಾವುಕರಾದರು. ಇಡೀ ದೇಶವೇ ಅವರ ಬಗ್ಗೆ ಭಾವುಕವಾಗಿದ್ದು, ಅವರು ಕ್ಷಮೆ ಕೇಳುವ ಅಗತ್ಯವಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜನರು ಹೇಳಿದ್ದಾರೆ ಎಂದು ಪ್ರಧಾನಿ ತಿಳಿಸಿದರು.
#WATCH | Delhi: Prime Minister Narendra Modi interacted with the Indian contingent that participated in #CWG22, today. Union Sports Minister Anurag Thakur and MoS Sports Nisith Pramanik were also present at the occasion. #CommonwealthGames2022
(Source: PMO) pic.twitter.com/IpP9N9NaHJ
— ANI (@ANI) August 13, 2022
ಬರ್ಮಿಂಗ್‌ಹ್ಯಾಮ್‌ನಲ್ಲಿ ಭಾರತ 22 ಚಿನ್ನದೊಂದಿಗೆ ಒಟ್ಟು 61 ಪದಕಗಳನ್ನು ಗೆದ್ದಿದೆ. 22 ಚಿನ್ನ ಹೊರತುಪಡಿಸಿ 16 ಬೆಳ್ಳಿ ಹಾಗೂ 23 ಕಂಚಿನ ಪದಕ ಗೆಲ್ಲುವಲ್ಲಿ ಭಾರತದ ಆಟಗಾರರು ಯಶಸ್ವಿಯಾಗಿದ್ದಾರೆ.
ಪದಕ ವಿಜೇತರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ. ನಿಮ್ಮ ಕಠಿಣ ಪರಿಶ್ರಮ ಮತ್ತು ಸ್ಪೂರ್ತಿದಾಯಕ ಸಾಧನೆಯಿಂದ ದೇಶ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನ ಪ್ರವೇಶಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಪ್ರಧಾನಿ ಮೋದಿ ಹೇಳಿದರು.
ಕುಸ್ತಿ ಮತ್ತು ವೇಟ್ ಲಿಫ್ಟಿಂಗ್ ನಲ್ಲಿ ಹೆಚ್ಚು ಪದಕ…
ಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್ ಗೇಮ್ಸ್ 2022ರಲ್ಲಿ ಕುಸ್ತಿ ಮತ್ತು ವೇಟ್‌ಲಿಫ್ಟಿಂಗ್‌ನಲ್ಲಿ ಭಾರತದ ಅಥ್ಲೀಟ್‌ಗಳು ಅತಿ ಹೆಚ್ಚು ಪದಕಗಳನ್ನು ಗೆದ್ದಿದ್ದಾರೆ. ಕುಸ್ತಿಯಲ್ಲಿ ಭಾರತ ಒಟ್ಟು 12 ಪದಕಗಳನ್ನು ಗೆದ್ದಿದೆ. 6 ಚಿನ್ನ, ಒಂದು ಬೆಳ್ಳಿ ಮತ್ತು 5 ಕಂಚಿನ ಪದಕಗಳನ್ನ ತಮ್ಮದಾಗಿಸಿಕೊಂಡಿದ್ದಾರೆ.