ಗದಗ: ಸ್ವಾತಂತ್ರ್ಯೋವ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರು ರಾಜ್ಯದ ವಿದ್ಯಾರ್ಥಿಗಳಿಗೆ ಆಹ್ವಾನ ನೀಡಿದ್ದಾರೆ.
(Gadag) ಸರ್ಕಾರಿ ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ (NSS) ಘಟಕದ ಇಬ್ಬರು ವಿದ್ಯಾರ್ಥಿಗಳಿಗೆ ದೆಹಲಿ ಕೆಂಪುಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ (Independence Day) ಕಾಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಹ್ವಾನ ನೀಡಿದ್ದಾರೆ.
`ಮೇರಿ ಮಾಟಿ, ಮೇರಾ ದೇಶ’ ಎನ್ನುವ ಕಾರ್ಯಕ್ರಮವನ್ನು ಕಾಲೇಜಿನ ಎನ್ ಎಸ್ ಎಸ್ ಘಟಕ ಯಶಸ್ವಿ ಮಾಡುತ್ತ ಬಂದಿದೆ. ಅಮೃತ ವಾಟಿಕಾ ಕಾರ್ಯಕ್ರಮದಡಿ, 50 ಗಿಡಗಳನ್ನು ನೆಟ್ಟು ಸತೀಶ್ ಕನ್ನೇರ್ ಹಾಗೂ ಆದಿತ್ಯ ಕೊರವರ ಎಂಬ ವಿದ್ಯಾರ್ಥಿಗಳು ಪೋಷಿಸಿದ್ದಾರೆ. ಹೀಗಾಗಿ ಪ್ರಧಾನಿ ಕಚೇರಿಯಿಂದ ವಿಶೇಷ ಅತಿಥಿಗಳಾಗಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಇಬ್ಬರು ವಿದ್ಯಾರ್ಥಿಗಳನ್ನು ಆಹ್ವಾನಿಸಿದೆ.
ಸತೀಶ್ ಹಾಗೂ ಆದಿತ್ಯ ಎಂಬ ವಿದ್ಯಾರ್ಥಿಗಳು ಬಹಳಷ್ಟು ಅಚ್ಚುಕಟ್ಟಾಗಿ ಗಿಡಗಳನ್ನು ಬೆಳೆಸಿದ್ದರು. ಹೀಗಾಗಿ ಇವರಿಗೆ ಪ್ರಧಾನಿ ಕಚೇರಿಯಿಂದ ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ. ಈ ಕುರಿತು ತಿಳಿಸಿದ ಶಿಕ್ಷಕರು, ಸ್ವಾತಂತ್ರ್ಯೋವದ ಅಮೃತ ಮಹೋತ್ಸವ ಸಮಯದಲ್ಲಿ ವಿದ್ಯಾರ್ಥಿಗಳು ಮಹಾಗನಿ ಹಾಗೂ ತಬೀಬ್ ರೋಜಾ ಜಾತಿಯ ಗಿಡಗಳನ್ನು ನೆಟ್ಟು ಪಾಲನೆ ಪೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 24 ಜನರಿಗೆ ಪ್ರಧಾನಿ ಕಚೇರಿಯಿಂದ ಆಹ್ವಾನ ಬಂದಿದೆ. ಆ ಪೈಕಿ ಗದಗ ಜಿಲ್ಲೆಯ ಸತೀಶ್ ಮತ್ತು ಆದಿತ್ಯ ಎಂಬ ಇಬ್ಬರು ವಿದ್ಯಾರ್ಥಿಗಳಿಗೆ ವಿಶೇಷ ಅತಿಥಿಗಳಾಗಿ ಆಹ್ವಾನ ಪಡೆದುಕೊಂಡಿದ್ದಾರೆ. ಅಲ್ಲದೇ, ಪ್ರಧಾನಿ ನರೇಂದ್ರ ಮೋದಿ ಅವರ ಸಂವಾದ ಹಾಗೂ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅಹ್ವಾನ ಸಿಕ್ಕಿದೆ. ಇದು ಕಾಲೇಜಿಗೆ ಹೆಮ್ಮೆ ತರುವ ವಿಷಯ ಎಂದು ಹೇಳಿದ್ದಾರೆ.