ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Manmohan Singh) ಗೆ ಪ್ರಧಾನಿ ನರೇಂದ್ರ ಮೋದಿ ಅಂತಿಮ ನಮನ ಸಲ್ಲಿಸಿದ್ದಾರೆ.
ಮನಮೋಹನ್ ಸಿಂಗ್ ಅವರ ದೆಹಲಿಯ ನಿವಾಸಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅಂತಿಮ ನಮನ ಸಲ್ಲಿಸಿದ್ದಾರೆ. ಅಲ್ಲದೇ, ಅವರ ಕುಟುಂಬಕ್ಕೆ ಪ್ರಧಾನಿ ಸಂತಾಪ ಸೂಚಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವು ಬಿಜೆಪಿ ನಾಯಕರು ಕೂಡ ಮನಮೋಹನ್ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಮಾಜಿ ಪ್ರಧಾನಿ ನಿವಾಸದಲ್ಲಿ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಸೇರಿದ್ದಾರೆ.,
92 ವಯಸ್ಸಿನ ಮನಮೋಹನ್ ಸಿಂಗ್ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಸಿಂಗ್ ಅವರಿಗೆ ಪತ್ನಿ ಗುರುಶರಣ್ ಕೌರ್ ಕೊಹ್ಲಿ ಮತ್ತು ಉಪಿಂದರ್ ಸಿಂಗ್, ಅಮೃತ್ ಸಿಂಗ್, ದಮನ್ ಸಿಂಗ್ ಎಂಬ ಮೂವರು ಮಕ್ಕಳಿದ್ದಾರೆ.
“ನೀವು ತಮಿಳುನಾಡಿಗೆ ಬನ್ನಿ, ನಾನು ನಿಮ್ಮನ್ನು ನೋಡಿಕೊಳ್ಳುತ್ತೇನೆ” :ಬೆದರಿಕೆ ಹಾಕಿದ್ರಾ ಸಂಸದ Vaiko?;ನಿರ್ಮಲಾ ಸೀತಾರಾಮನ್ ಕೆಂಡಾಮಂಡಲ!
ರಾಜ್ಯಸಭೆಯಲ್ಲಿ ನಡೆದ ವಕ್ಫ್ ತಿದ್ದುಪಡಿ ಮಸೂದೆಯ ಕುರಿತ ಚರ್ಚೆಯಲ್ಲಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ತಮಿಳುನಾಡಿನ ಸಂಸದ ವೈಕೋ ನಡುವಿನ ವಾದವು ಗಮನ ಸೆಳೆದಿದೆ....