16 ಭಾಷೆಗಳಲ್ಲಿ 40 ಸಾವಿರ ಹಾಡುಗಳನ್ನು ಹಾಡಿದ ಗಾನ ಕೋಗಿಲೆ ಇಂದು ಯುಗಾಂತ್ಯರಾಗಿದ್ದಾರೆ. ಗಾನ ಗಂಧರ್ವ ಎಸ್ಪಿಗೆ ಅಗಲಿಕೆಗೆ ಇಡೀ ದೇಶವೇ ಕಂಬನಿ ಮಿಡಿದಿದೆ. ಹಿಂದಿ ಸೇರಿದಂತೆ ಹಲವು ಭಾಷೆಗಳ ಅಭಿಮಾನಿಗಳು, ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ ಎಸ್ ಪಿ ಬಿ ಅವರ ಅಗಲಿಕೆಯಿಂದ “ಸಾಂಸ್ಕೃತಿಕ ಲೋಕ ಬಡವಾಗಿದೆ”. “ ತಮ್ಮ ಗಾಯನದ ಮೂಲಕ ಲಕ್ಷಾಂತರ ಜನರನ್ನು ತಲುಪಿದ್ದ ಎಸ್ಪಿಬಿ ಅವರ ಧ್ವನಿ ಅಮರವಾಗಲಿದೆ” ಎಂದು ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.
ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಎಸ್ಪಿ ಅವರಿಗೆ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಎಂದಿದ್ದಾರೆ.
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಸಹ “ ಎಸ್ ಪಿಬಿ ಅವರ ಅಗಲಿಕೆಯಿಂದ ದೇಶ ಬಡವಾಗಿದೆ ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.