ದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಾಳೆಯಿಂದ ಚುನಾವಣೆ ಅಖಾಡಕ್ಕೆ ಧುಮುಕಲಿದ್ದಾರೆ.
ಮೂರನೇ ಅವಧಿಗೆ ತಮ್ಮ ಲೋಕಸಭಾ ಚುನಾವಣಾ (Lok sabha Election) ಪ್ರಚಾರಕ್ಕೆ ಚಾಲನೆ ನೀಡಲಿದ್ದು, ಪಶ್ಚಿಮ ಉತ್ತರ ಪ್ರದೇಶದ ಬುಲಂದ್‌ಶಹರ್‌ನಿಂದ (Bulandshahr) ಪ್ರಾರಂಭಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ ಎನ್ನಲಾಗಿದೆ.
ಜ. 25 ರಂದು ಬುಲಂದ್ ಶಹರ್ ನಲ್ಲಿ ಪ್ರಧಾನಿ ಮೋದಿ ತಮ್ಮ ಪ್ರಚಾರ ಆರಂಭಿಸಲಿದ್ದು, ಸುಮಾರು 5 ಲಕ್ಷ ಜನರು ಸೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. 2014ರ ಲೋಕಸಭೆ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಬಿಜೆಪಿ, 2019ರಲ್ಲಿ 80ರಲ್ಲಿ 62 ಸ್ಥಾನಗಳನ್ನು ಗೆದ್ದಿದ್ದರೂ ಅಲ್ಪ ಹಿನ್ನಡೆ ಕಂಡಿತ್ತು. ಆರು ಕ್ಷೇತ್ರಗಳಲ್ಲಿ ಸೋಲು ಕಂಡಿದ್ದ ಪಕ್ಷಕ್ಕೆ ಪಶ್ಚಿಮ ಉತ್ತರ ಪ್ರದೇಶ ಈಗ ಬಿಜೆಪಿಗೆ ಸವಾಲಾಗಿದೆ. ಹೀಗಾಗಿ ಅಲ್ಲಿಂದಲೇ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ.
ನರೇಂದ್ರ ಮೋದಿ ಅವರು ಪಶ್ಚಿಮ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ 19,100 ಕೋಟಿ ರೂ.ಗೂ ಹೆಚ್ಚು ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಗುರುವಾರ ಚಾಲನೆಕಯನ್ನು ಕೂಡ ನೀಡಲಿದ್ದಾರೆ.








